ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕರ ಪುತ್ರನ ಲಂಚದ ಪ್ರಕರಣ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.


COMMERCIAL BREAK
SCROLL TO CONTINUE READING

ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ 40 ಲಕ್ಷ ರೂ. ಲಂಚ ತೆಗೆದುಕೊಳ್ಳುವ ವೇಳೆ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಅವರ ನಿವಾಸದಲ್ಲಿ 8 ಕೋಟಿ ರೂ. ನಗದು ಸಿಕ್ಕಿದೆ. ಇದರಿಂದ ಬಿಜೆಪಿ ಸರ್ಕಾರದ 40% ಕಮೀಷನ್ ದಂಧೆ ಬಟಾಬಯಲಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.


ಇದನ್ನೂ ಓದಿ: ಕರ್ನಾಟಕ ಯಾರ ಎಟಿಎಂ ಆಗಿದೆ? ಸರಣಿ ಟ್ವೀಟ್ ಮೂಲಕ ಅಮಿತ್ ಶಾರನ್ನು ಪ್ರಶ್ನಿಸಿದ ಹೆಚ್.ಡಿ. ಕುಮಾರಸ್ವಾಮಿ


ಭ್ರಷ್ಟಾಚಾರ ಆರೋಪದ ಕಾರಣ ನೈತಿಕ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ಕೂಡಲೇ ರಾಜೀನಾಮೆ ನೀಡಬೇಕು. ಇದೇ ವಿಚಾರವಾಗಿ ಮುಖ್ಯಮಂತ್ರಿಗಳ  ನಿವಾಸಕ್ಕೆ ಮುತ್ತಿಗೆ ಹಾಕಲು ರಾಜ್ಯ ಕಾಂಗ್ರೆಸ್ ನಾಯಕರು ಪ್ಲಾನ್ ಮಾಡಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿ ನಿವಾಸಕ್ಕೆ ಕಾಂಗ್ರೆಸ್ ನಾಯಕರು ಮುತ್ತಿಗೆ ಹಾಕಲಿದ್ದಾರೆಂದು ತಿಳಿದುಬಂದಿದೆ.


ಈ ಪ್ರತಿಭಟನೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಪಕ್ಷದ ಹಿರಿಯ ಮುಖಂಡರು, ಸಂಸದರು, ಶಾಸಕರು ಮತ್ತು ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.


ಇದನ್ನೂ ಓದಿ: ʼಮಾಡಾಳ್‌ ಲೋಕಾಯುಕ್ತ ದಾಳಿʼ... 18 ಗಂಟೆ ಶೋಧ, 8.12 ಕೋಟಿ ಹಣ ಸೀಜ್..!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.