ಬೆಂಗಳೂರು: ತಮಿಳುನಾಡು ಮೇಕೆದಾಟು (Mekedatu) ಯೋಜನೆ ವಿಚಾರವಾಗಿ ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಇಂದು ಕಾನೂನು ಹಾಗೂ ತಾಂತ್ರಿಕ ಸಲಹೆ ಪಡೆದು ನಾಳೆ ಸದನದಲ್ಲಿ ನಿರ್ಣಯ ತರಲಾಗುವುದು ಎಂದು ತಿಳಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: CLP Meeting : ಕಾಂಗ್ರೆಸ್ ಶಾಸಕಾಂಗ ಸಭೆಗೆ ಪಕ್ಷದ ಪ್ರಮುಖರೆ ಗೈರು!


ಶೂನ್ಯ ವೇಳೆಯಲ್ಲಿ ಮೇಕೆದಾಟು ವಿಚಾರವಾಗಿ ಮಾತನಾಡಿದ ಅವರು, ಮೇಕೆದಾಟು ಕುಡಿಯುವ ನೀರು ಹಾಗೂ ವಿದ್ಯುತ್ (Electricity) ಉತ್ಪಾದನೆಗಾಗಿ ಯೋಜನೆ ಆಗಿದ್ದು, ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ‌ ಸಮಸ್ಯೆ ಇಲ್ಲ. ತಮಿಳುನಾಡು ಹೆಚ್ಚುವರಿ ನೀರನ್ನ ಬಳಕೆ ಮಾಡಿ‌ ಯೋಜನೆ ರೂಪಿಸುತ್ತಿದ್ದಾರೆ. ಹೊಗೆನಕಲ್ ಎರಡನೇ‌ ಹಂತವನ್ನು ತೆಗೆದುಕೊಳ್ಳುವ ಮಾತು ನಮ್ಮ ನೀರಿನ‌ ಹಕ್ಕಿನ ಮೇಲೆ ಹೊಡೆತ ಆಗಿದೆ. ಅದಕ್ಕಾಗಿ ವಿರೋಧ ಮಾಡಿದ್ದೇವೆ ಮುಂದೆಯೂ ಮಾಡುತ್ತೇವೆ ಎಂದರು.


ನಾವು ಕಾವೇರಿ (Kaveri Water) ನೀರನ್ನು ಬಳಕೆ ಮಾಡುವ ಎಲ್ಲ ಸಂದರ್ಭದಲ್ಲಿ ತಮಿಳುನಾಡಿನಿಂದ ಅಡ್ಡಿಯಾಗುತ್ತಿದೆ. ನಮ್ಮ ನೀರಿನ ಹಕ್ಕು ಪಡೆದುಕೊಳ್ಳಲು ನಾವು ಪರಿತಪಿಸುವುದು ರಾಜ್ಯದ ಹಿತ ದೃಷ್ಟಿಯಿಂದ ಸರಿಯಲ್ಲ. ಇದನ್ನು ಪ್ರಬಲವಾಗಿ ತೆಗೆದುಕೊಂಡು‌ ಹೋಗುತ್ತೇವೆ ಎಂದರು. 


ಇದನ್ನೂ ಓದಿ: ಜೂಜು ಅಡ್ಡೆ ಮೇಲೆ ಚಿಕ್ಕಬಳ್ಳಾಪುರ ಪೊಲೀಸರ ದಾಳಿ, 19 ಜನ ಅರೆಸ್ಟ್


ಕೇಂದ್ರಕ್ಕೂ ಒತ್ತಾಯ ಮಾಡುತ್ತೇವೆ. ನಮ್ಮ ಡಿಪಿಆರ್ (DPR) ಹಾಗೂ ಪರಿಸರ ಇಲಾಖೆಯ ಅನುಮತಿ ಸಿಗಬೇಕು. ಅದರಲ್ಲಿ ಎರಡು ಮಾತಿಲ್ಲ. ತಮಿಳುನಾಡು ಯೋಜನೆ ಮಾಡುತ್ತಿದ್ದಾರೆ. ಅದಕ್ಕೆ ನೀರಿನ ಹಂಚಿಕೆ ಇಲ್ಲ. ಈ ಬಗ್ಗೆ ತಾಂತ್ರಿಕ ಮಾಹಿತಿ ಪಡೆದುಕೊಳ್ಳುತ್ತೇವೆ. ತಮಿಳುನಾಡು (Tamilnadu) ನಿರ್ಣಯ‌ ಕಾನೂನು ಬಾಹಿರ ಆಗಿದೆ. ನಮ್ಮ ಹಕ್ಕಿನ ಮೇಲೆ ಗದಾ ಪ್ರಹಾರ ಹಾಗೂ ಒಕ್ಕೂಟ ವ್ಯವಸ್ಥೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ನಮ್ಮ ನಿಲುವು ಈ ಬಗ್ಗೆ ಸ್ಪಷ್ಟವಾಗಿದೆ:


ನಾಳೆ ನಿರ್ಣಯ ತರುತ್ತೇವೆ. ವಿಳಂಬ ಮಾಡುವುದು ಸರಿಯಲ್ಲ. ಕಾನೂನು ಸಲಹೆಗಾರರ ಜೊತೆ ಸಂಜೆ ಈ ಬಗ್ಗೆ ಚರ್ಚೆ ಮಾಡಲಾಗುವುದು. ಅವರ ಸಲಹೆ ಪಡೆದು ನಾಳೆ ಸದನದ ಮುಂದೆ ಸ್ಪಷ್ಟವಾದ ನಿಲುವು ಹೇಳುತ್ತೇವೆ. ಯೋಜನೆ ಕಾರ್ಯಗತಗೊಳಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ ಎಂದು ಆಶ್ವಾಸನೆ ನೀಡಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.