ದುಬಾರಿ ವೈದ್ಯಕೀಯ ಶಿಕ್ಷಣ.. ಪರ್ಯಾಯ ಕ್ರಮಗಳ ಬಗ್ಗೆ ಕೇಂದ್ರ ಗಂಭೀರ ಚಿಂತನೆ: ಸಿಎಂ ಬಸವರಾಜ ಬೊಮ್ಮಾಯಿ

ಉಕ್ರೇನ್ ನಿಂದ ಭಾರತಕ್ಕೆ ವಾಪಸ್ಸಾಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಅಪೂರ್ಣವಾಗಿದ್ದು, ಪರ್ಯಾಯ ಕ್ರಮಗಳ ಬಗ್ಗೆ ಕೇಂದ್ರ  ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

Written by - Prashobh Devanahalli | Edited by - Chetana Devarmani | Last Updated : Mar 21, 2022, 01:23 PM IST
  • ಉಕ್ರೇನ್ ನಿಂದ ಭಾರತಕ್ಕೆ ವಾಪಸ್ಸಾಗಿರುವ ವೈದ್ಯಕೀಯ ವಿದ್ಯಾರ್ಥಿಗಳು
  • ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಅಪೂರ್ಣವಾಗಿದೆ
  • ಪರ್ಯಾಯ ಕ್ರಮಗಳ ಬಗ್ಗೆ ಕೇಂದ್ರ ಗಂಭೀರ ಚಿಂತನೆ ನಡೆಸಲಾಗುತ್ತಿದೆ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
ದುಬಾರಿ ವೈದ್ಯಕೀಯ ಶಿಕ್ಷಣ.. ಪರ್ಯಾಯ ಕ್ರಮಗಳ ಬಗ್ಗೆ ಕೇಂದ್ರ  ಗಂಭೀರ ಚಿಂತನೆ: ಸಿಎಂ ಬಸವರಾಜ ಬೊಮ್ಮಾಯಿ title=
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ: ಉಕ್ರೇನ್ ನಿಂದ ಭಾರತಕ್ಕೆ ವಾಪಸ್ಸಾಗಿರುವ ವೈದ್ಯಕೀಯ (Medical) ವಿದ್ಯಾರ್ಥಿಗಳ ಶಿಕ್ಷಣ ಅಪೂರ್ಣವಾಗಿದ್ದು, ಪರ್ಯಾಯ ಕ್ರಮಗಳ ಬಗ್ಗೆ ಕೇಂದ್ರ  ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದರು. 

ಇದನ್ನೂ ಓದಿ: Liquor Ban in Bihar : ಬಿಹಾರದಲ್ಲಿ ಮದ್ಯ ನಿಷೇಧ, ಆದರೂ ವಿಷಪೂರಿತ ಮದ್ಯ ಸೇವಿಸಿ 18 ಜನರ ಸಾವು

ನವೀನ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳುವ ಸಂದರ್ಭದಲ್ಲಿ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಕ್ರೇನ್ ನಲ್ಲಿ (Ukraine) ಕೋರ್ಸ್‌ ಭಿನ್ನವಾಗಿದೆ. ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳು ಇರುವುದರಿಂದ ಈ ಕುರಿತು ಕೇಂದ್ರ ಗಂಭೀರವಾಗಿ ಚಿಂತನೆ ನಡೆಸಿದೆ ಎಂದರು. 

ಸರ್ಕಾರದ ಶುಲ್ಕ ಕಡಿಮೆಯಿದ್ದರೂ, ವೈದ್ಯಕೀಯ ಶಿಕ್ಷಣದ ವೆಚ್ಚ ಖಾಸಗಿ ವಲಯದಲ್ಲಿ ಹೆಚ್ಚಾಗುತ್ತಿದೆ. 90-95% ಪಡೆದ ವಿದ್ಯಾರ್ಥಿಗಳಿಗೆ ನೀಟ್ ನಲ್ಲಿ (NEET) ಉತ್ತೀರ್ಣರಾಗಲು ಆಗುತ್ತಿಲ್ಲ. ಹೀಗಾಗಿ ಮ್ಯಾನೇಜ್ಮೆಂಟ್ ಹಾಗೂ ಎನ್.ಆರ್.ಐ ಸೀಟುಗಳನ್ನು ಪಡೆಯಲು ದುಬಾರಿಯಾಗಿರುವುದರಿಂದ ಪರ್ಯಾಯ ಮಾರ್ಗ ಹುಡುಕುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Naveen Gyangoudar: ಯುದ್ಧಭೂಮಿ ಉಕ್ರೇನ್​ನಿಂದ ತಾಯ್ನಾಡಿಗೆ ಬಂದ ನವೀನ್ ಮೃತದೇಹ

ನಮ್ಮ ರಾಜ್ಯದಲ್ಲಿ ಶುಲ್ಕ ಕಡಿಮೆ ಮಾಡಲು  ಎ, ಬಿ, ಸಿ ವರ್ಗಗಳನ್ನು ಮಾಡುವ ಬಗ್ಗೆ ಚರ್ಚೆಯಾಗುತ್ತಿದೆ. ವೈದ್ಯಕೀಯ ಕೋರ್ಸ್‌ ರಾಷ್ಟ್ರೀಯ ವೈದ್ಯಕೀಯ ಮಂಡಳಿ ನಿರ್ಧರಿಸುತ್ತದೆ. ಈ ಬಗ್ಗೆ ಪುನರ್ ಪರಿಶೀಲನೆ ನಡೆದಿದೆ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News