ದಾವಣಗೆರೆ: ಉಕ್ರೇನ್ ನಿಂದ ಭಾರತಕ್ಕೆ ವಾಪಸ್ಸಾಗಿರುವ ವೈದ್ಯಕೀಯ (Medical) ವಿದ್ಯಾರ್ಥಿಗಳ ಶಿಕ್ಷಣ ಅಪೂರ್ಣವಾಗಿದ್ದು, ಪರ್ಯಾಯ ಕ್ರಮಗಳ ಬಗ್ಗೆ ಕೇಂದ್ರ  ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದರು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Liquor Ban in Bihar : ಬಿಹಾರದಲ್ಲಿ ಮದ್ಯ ನಿಷೇಧ, ಆದರೂ ವಿಷಪೂರಿತ ಮದ್ಯ ಸೇವಿಸಿ 18 ಜನರ ಸಾವು


ನವೀನ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳುವ ಸಂದರ್ಭದಲ್ಲಿ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಕ್ರೇನ್ ನಲ್ಲಿ (Ukraine) ಕೋರ್ಸ್‌ ಭಿನ್ನವಾಗಿದೆ. ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳು ಇರುವುದರಿಂದ ಈ ಕುರಿತು ಕೇಂದ್ರ ಗಂಭೀರವಾಗಿ ಚಿಂತನೆ ನಡೆಸಿದೆ ಎಂದರು. 


ಸರ್ಕಾರದ ಶುಲ್ಕ ಕಡಿಮೆಯಿದ್ದರೂ, ವೈದ್ಯಕೀಯ ಶಿಕ್ಷಣದ ವೆಚ್ಚ ಖಾಸಗಿ ವಲಯದಲ್ಲಿ ಹೆಚ್ಚಾಗುತ್ತಿದೆ. 90-95% ಪಡೆದ ವಿದ್ಯಾರ್ಥಿಗಳಿಗೆ ನೀಟ್ ನಲ್ಲಿ (NEET) ಉತ್ತೀರ್ಣರಾಗಲು ಆಗುತ್ತಿಲ್ಲ. ಹೀಗಾಗಿ ಮ್ಯಾನೇಜ್ಮೆಂಟ್ ಹಾಗೂ ಎನ್.ಆರ್.ಐ ಸೀಟುಗಳನ್ನು ಪಡೆಯಲು ದುಬಾರಿಯಾಗಿರುವುದರಿಂದ ಪರ್ಯಾಯ ಮಾರ್ಗ ಹುಡುಕುತ್ತಿದ್ದಾರೆ ಎಂದು ಹೇಳಿದರು.


ಇದನ್ನೂ ಓದಿ: Naveen Gyangoudar: ಯುದ್ಧಭೂಮಿ ಉಕ್ರೇನ್​ನಿಂದ ತಾಯ್ನಾಡಿಗೆ ಬಂದ ನವೀನ್ ಮೃತದೇಹ


ನಮ್ಮ ರಾಜ್ಯದಲ್ಲಿ ಶುಲ್ಕ ಕಡಿಮೆ ಮಾಡಲು  ಎ, ಬಿ, ಸಿ ವರ್ಗಗಳನ್ನು ಮಾಡುವ ಬಗ್ಗೆ ಚರ್ಚೆಯಾಗುತ್ತಿದೆ. ವೈದ್ಯಕೀಯ ಕೋರ್ಸ್‌ ರಾಷ್ಟ್ರೀಯ ವೈದ್ಯಕೀಯ ಮಂಡಳಿ ನಿರ್ಧರಿಸುತ್ತದೆ. ಈ ಬಗ್ಗೆ ಪುನರ್ ಪರಿಶೀಲನೆ ನಡೆದಿದೆ ಎಂದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.