ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಮಿಷನರ್ ಪರಿಶೀಲನೆ

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೆಲವು ಮತಗಟ್ಟೆಗಳಿಗೆ ಭೇಟಿ ನೀಡಿ ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.

Written by - Manjunath Hosahalli | Edited by - Yashaswini V | Last Updated : Jan 19, 2023, 02:47 PM IST
  • ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆಯ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
  • ಈ ಸಂಬಂಧ ಮುಖ್ಯ ಆಯುಕ್ತರು ಇಂದು ಲಾರೆನ್ಸ್ ಸ್ಕೂಲ್, ಅಗರ ಕರ್ನಾಟಕ ಪಬ್ಲಿಕ್ ಶಾಲೆ, ಸೋಮಸುಂದರ ಪಾಳ್ಯ ಸರ್ಕಾರಿ ಶಾಲೆ, ಹೊಂಗಸಂದ್ರ ವಿದ್ಯಾಜ್ಯೋತಿ ಶಾಲೆಯಲ್ಲಿ ಮತಗಟ್ಟೆಗಳ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • ಈ ವೇಳೆ ಎಲ್ಲಾ ಮತಗಟ್ಟೆಗಳಲ್ಲೂ ಕನಿಷ್ಠ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿ ಇರಬೇಕು. ಇಲ್ಲವಾದಲ್ಲಿ ಬೇರೆಡೆ ಮತಗಟ್ಟೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಮಿಷನರ್ ಪರಿಶೀಲನೆ title=
Assembly Election

ಬೆಂಗಳೂರು: ಬೆಂಗಳೂರು ನಗರದ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಕೆಲ ಮತಗಟ್ಟೆಗಳಿಗೆ ಹಾಗೂ ಮತಗಟ್ಟೆಗಳಲ್ಲಿ ಇರಬೇಕಿದ್ದ ಕನಿಷ್ಠ ಮೂಲಭೂತ ಸೌಕರ್ಯಗಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್, ಪೀಟೊಪಕರಣಗಳು, ಕೊಠಡಿ, ಸಹಾಯ ಕೇಂದ್ರ, ಶೌಚಾಯಲಗಳ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪರಿಶೀಲನೆ ನಡೆಸಿದರು. ಇದೆಲ್ಲವನ್ನೂ ಸರಿಯಾಗಿ ಪರಿಶೀಲನೆ ನಡೆಸಿ ವರದಿ ನೀಡಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಸಹಾಯ ಮತದಾರರ ನೋಂದಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ, ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆಯ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಮುಖ್ಯ ಆಯುಕ್ತರು ಇಂದು ಲಾರೆನ್ಸ್ ಸ್ಕೂಲ್, ಅಗರ ಕರ್ನಾಟಕ ಪಬ್ಲಿಕ್ ಶಾಲೆ, ಸೋಮಸುಂದರ ಪಾಳ್ಯ ಸರ್ಕಾರಿ ಶಾಲೆ, ಹೊಂಗಸಂದ್ರ ವಿದ್ಯಾಜ್ಯೋತಿ ಶಾಲೆಯಲ್ಲಿ ಮತಗಟ್ಟೆಗಳ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಲ್ಲಾ ಮತಗಟ್ಟೆಗಳಲ್ಲೂ ಕನಿಷ್ಠ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿ ಇರಬೇಕು. ಇಲ್ಲವಾದಲ್ಲಿ ಬೇರೆಡೆ ಮತಗಟ್ಟೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಎಸ್ಆರ್ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ:
ಹೆಚ್ಎಸ್ಆರ್ ಬಿಡಿಎ ಕಾಫ್ಲೆಕ್ಸ್ ಬಳಿ ಪಾದಚಾರಿ ಮಾರ್ಗವನ್ನು ಬೀದಿ ಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವುದನ್ನು ಗಮನಿಸಿ, ಪ್ರಮುಖ ರಸ್ತೆಗಳಲ್ಲಿ ಬೀದಿ ವ್ಯಾಪಾರಿಗಳು ಮಾರಾಟ ಮಾಡಲು ಅವಕಾಶ ನೀಡಬಾರದು. ಎಲ್ಲಾ ಬೀದಿ ವ್ಯಾಪಾರಿಗಳಿಗೆ ವಾರ್ಡ್ ರಸ್ತೆಗಳಲ್ಲಿ ವ್ಯಾಪಾರ ಮಾಡಲು ಸ್ಥಳಾವಕಾಶ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಇದನ್ನೂ ಓದಿ- ಮದ್ಯ ಖರೀದಿ ವಯಸ್ಸಿನ ಮಿತಿ ಕಡಿತ; ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ

ಹೆಚ್ಎಸ್ಆರ್ 6ನೇ ಸೆಕ್ಟರ್ ನಲ್ಲಿ ಹೊಸದಾಗಿ ಹಾಕಿರುವ ಡಾಂಬರೀಕರಣ ಪರಿಶೀಲಿಸಿ ಕೆಲ ನ್ಯೂನ್ಯತೆಗಳನ್ನು ಗಮನಿಸಿ ಅದನ್ನು ಸರಿಪಡಿಸಲು ಸೂಚನೆ ನೀಡಿದರು ಹಾಗೂ ಹೊಸದಾಗಿ ನಿರ್ಮಾಣ ಮಾಡಿರುವ ಡಾಂಬರು ರಸ್ತೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಶೋಲ್ಡರ್ ಡ್ರೈನ್ ನಿರ್ಮಿಸಲು ಸೂಚಿಸಿದರು. ಸರ್ವೀಸ್ ರಸ್ತೆಗಳ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ನಾಮಫಲಕ ಹಾಗೂ ರ‍್ಯಾಂಪ್ ಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಎಸ್ಆರ್ 6ನೇ ಸೆಕ್ಟರ್ ಬಳಿ ಕೆ-200 ರಾಜಕಾಲುವೆಗೆ ಆರ್.ಸಿ.ಸಿ ವಾಲ್ ಕಾಮಗಾರಿ ಪ್ರಾರಂಭಿಸಬೇಕಿದ್ದು, ಮುಂದಿನ ವಾರವೇ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇನ್ನು ಹೆಚ್ಎಸ್ಆರ್ ಬಡಾವಣೆ 19ನೇ ಮುಖ್ಯ ರಸ್ತೆಯಲ್ಲಿ 7 ಎಕರೆ ಪ್ರದೇಶದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಆಟದ ಮೈದಾನಕ್ಕೆ ಭೇಟಿ ನೀಡಿ ಕ್ರೀಡಾಂಗಣದಲ್ಲಿ ಈಗಾಗಲೇ ಬ್ಯಾಸ್ಕೆಟ್ ಬಾಲ್ ಕೋರ್ಟ್, ಕಬ್ಬಡಿ ಮೈದಾನ, ವಾಲಿಬಾಲ್ ಕೋರ್ಟ್, ಗ್ಯಾಲರಿ ಹಾಗೂ ಪ್ಲೆಡ್ ಲೈಟ್ ಅಳವಡಿಸಲಾಗಿದೆ. ಜೊತೆಗೆ ಕ್ರಿಕೆಟ್ ಪಿಚ್, ಗ್ಯಾಲರಿ, ಇಂಡೋರ್ ಸ್ಟೇಡಿಯಂ, ಶೌಚಾಲಯ, ವಾಕಿಂಗ್ ಟ್ರ್ಯಾಕ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಂಡು ಬಾಕಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿದರು. 

ಬೇಗೂರು ಕೆರೆ ಕಾಮಗಾರಿ ಪರಿಶೀಲನೆ:
ಬೇಗೂರು ಕೆರೆಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಮಳೆಗಾಲ ಪ್ರಾರಂಭವಾಗುವುದಕ್ಕೂ ಮುನ್ನ ಸ್ಲೂಯಿಸ್ ಗೇಟ್ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೇಗೂರು ಕೆರೆಯ ಬಳಿ ರಸ್ತೆ ನಿರ್ಮಾಣದ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಇಂಟರ್ ಲಾಕಿಂಗ್ ಫೇವರ್ಸ್ ಗಳನ್ನು ಸರಿಪಡಿಸಲು ಸೂಚಿಸಿದರು. 

ಇದನ್ನೂ ಓದಿ- ಪಿಯುಸಿಯಲ್ಲಿ ಶೇ.99 ರಷ್ಟು ಅಂಕ ಗಳಿಸಿರುವ ಯುವತಿಯಿಂದ ಸನ್ಯಾಸತ್ವ ಸ್ವೀಕಾರ

ಪರಿಶೀಲನೆಯ ವೇಳೆ ವಲಯ ಆಯುಕ್ತರಾದ ಡಾ. ಹರೀಶ್ ಕುಮಾರ್, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಉಜ್ವಲ್ ಕುಮಾರ್ ಘೋಷ್, ವಲಯ ಜಂಟಿ ಆಯುಕ್ತರಾದ ಕೃಷ್ಣಮೂರ್ತಿ, ಅಪರ ಜಿಲ್ಲಾ ಚುನಾವಣಾ ಅಧಿಕಾರಿಯಾದ ಡಾ. ಜಗದೀಶ್ ನಾಯ್ಕ್(ದಕ್ಷಿಣ), ವಲಯ ಮುಖ್ಯ ಅಭಿಯಂತರರಾದ ಶಶಿಕುಮಾರ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News