ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಪ್ರವಾಹದಿಂದ ತತ್ತರಿಸಿರುವ ರಾಜ್ಯಕ್ಕೆ ಪರಿಹಾರ ಕಾರ್ಯಗಳಿಗಾಗಿ ಕೂಡಲೇ ಅನುದಾನ ಬಿಡುಗಡೆಗೆ ಕ್ರಮವಹಿಸುವಂತೆ ಮನವಿ ಮಾಡಿದರು.


COMMERCIAL BREAK
SCROLL TO CONTINUE READING

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ, ಕೂಡಲೇ ನಷ್ಟದ ಅಂದಾಜು ಮಾಡಲು ಕೇಂದ್ರ ಸರ್ಕಾರದ ಅಧ್ಯಯನ ತಂಡವನ್ನು ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.


ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಗಂಭೀರತೆಯ ಕುರಿತು 45 ನಿಮಿಷಗಳ ಕಾಲ ಚರ್ಚಿಸಿದ  ಯಡಿಯೂರಪ್ಪ ಅಂಡ್ ಟೀಮ್, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ನಷ್ಟ ಸಂಭವಿಸಿದೆ. ಪುನರ್ನಿಮಾಣ ಮತ್ತು ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ವಿವರಿಸಿದರು.


ಈ ಸಂದರ್ಭದಲ್ಲಿ ಯಡಿಯೂರಪ್ಪನವರ ಜತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ, ರಾಜ್ಯ ನಾಯಕರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಉಪಸ್ಥಿತರಿದ್ದರು.