ಬೆಂಗಳೂರು: ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ:
ಸಭೆಯ ಮುಖ್ಯಾಂಶಗಳು:
1. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಗರಿಷ್ಠ ಮೂರು ತಿಂಗಳೊಳಗೆ ಮುಕ್ತಾಯವಾಗಬೇಕು.
2. ನಿವೇಶನ ಹಂಚಿಕೆ ಸಂಬಂಧ ರಾಜ್ಯದ ವಿವಿಧ ಭಾಗಗಳಲ್ಲಿರುವ ಆಸ್ತಿಗೆ ಆದ್ಯತೆ ಮೇರೆಗೆ ಡಿಪಿಆರ್ ಮಾಡಿ ಸಲ್ಲಿಸುವುದು.
3. 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ಬಹುಮಹಡಿ ಮನೆಗಳ ನಿರ್ಮಾಣ ಕಾಮಗಾರಿಗಳ ಪೈಕಿ 20000 ಮನೆಗಳನ್ನು ಪೂರ್ಣಗೊಳಿಸುವ ಗುರಿ ಇದೆ.
4. 20,000 ಮನೆಗಳನ್ನು ಪೂರ್ಣಗೊಳಿಸಲು ಅನುದಾನವನ್ನು ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುವುದು. ಕೀಲಿ ಕೈ ಹಸ್ತಾಂತರ ಮಾಡುವ ಮುನ್ನ ಷರತ್ತುಗಳನ್ನು ವಿಧಿಸುವುದು.
5. ಮುಗಿಯುವ ಹಂತದಲ್ಲಿರುವ ಮನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ, ಸಾಲವನ್ನು ಫಲಾನುಭವಿಗಳ ಹೆಸರಿಗೆ ವರ್ಗಾವಣೆ ಮಾಡಿಸುವುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.