ಮುರುಘಾ ಶರಣರ ಜನ್ಮದಿನವನ್ನು ಸಮಾನತಾ ದಿನಾಚರಣೆ ಎಂದು ಆಚರಿಸಲಾಗುವುದು: ಸಿಎಂ ಬೊಮ್ಮಾಯಿ

ಇಂದು  ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಸಮಾನತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. 

Written by - Prashobh Devanahalli | Edited by - Chetana Devarmani | Last Updated : Apr 11, 2022, 01:14 PM IST
  • ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ
  • ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ
  • ಮುರುಘಾ ಶರಣರ ಜನ್ಮದಿನವನ್ನು ಸಮಾನತಾ ದಿನಾಚರಣೆ ಎಂದು ಆಚರಿಸಲಾಗುವುದು
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
ಮುರುಘಾ ಶರಣರ ಜನ್ಮದಿನವನ್ನು ಸಮಾನತಾ ದಿನಾಚರಣೆ ಎಂದು ಆಚರಿಸಲಾಗುವುದು: ಸಿಎಂ ಬೊಮ್ಮಾಯಿ  title=
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುರುಘಾ ಶರಣರ  (Muragha Swamiji) ಜನ್ಮದಿನವನ್ನು ಸಮಾನತಾ ದಿನವೆಂದು ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದ್ದಾರೆ. 

ಇಂದು  ಬೆಂಗಳೂರಿನ ಅರಮನೆ ಮೈದಾನದಲ್ಲಿ (Palace Ground) ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಸಮಾನತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಿಎಂ ಮಾತನಾಡಿದರು. ಈ ವೇಳೆ ಬಸವಣ್ಣನವರ (Basavanna) ವೈಚಾರಿಕತೆ ತತ್ವ ಆದರ್ಶಗಳನ್ನು ಪುನಃ ಬಿತ್ತುವಂತಹ ಸಾಹಸಕ್ಕೆ ಕೈ ಹಾಕಿರುವ ಸೃಜನಶೀಲ ಚಿಂತಕರೂ ಆಗಿರುವ ಡಾ.ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚಾರಣೆಯನ್ನು ಸಮಾನತಾ ದಿನ ಎಂದು ಆಚರಿಸಲಾಗುತ್ತಿರುವುದು ಸೂಕ್ತ ವಾಗಿದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ:Snake Video: ಸ್ನಾನದ ಮನೆಯಲ್ಲಿ ಅಡಗಿ ಕೂತಿದ್ದ ಕಾಳಿಂಗ ಸರ್ಪ!

ಬಸವಾದಿ ಶರಣರ ಮಾತುಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಸಭೆ ಸಮಾರಂಭಗಳಲ್ಲಿ ಕೇಳಿಬರುವ ಮಾತು. 12 ನೇ  ಶತಮಾನದಲ್ಲಿ (12th Century) ಸಮಾನತೆ ತರುವುದು, ಲಿಂಗಬೇಧ, ಮೂಢ ನಂಬಿಕೆಗಳನ್ನು ತೊಡೆದುಹಾಕುವುದಕ್ಕಾಗಿ ಹೋರಾಟ ನಡೆಯಿತು. ಅವರ ವಿಚಾರ ಇಂದಿಗೂ ಪ್ರಸ್ತುತ ಎಂದರೆ ಆ ಎಲ್ಲಾ ಅನಿಷ್ಟಗಳು ಇಂದಿಗೂ ಪ್ರಚಲಿತವಾಗಿವೆ ಎಂಬ ಚಿಂತನೆ ಮೂಡುತ್ತದೆ. ಸಮಾಜ ಪರಿವರ್ತನೆಗೆ  ನಿರಂತರವಾದ ಶುದ್ದೀಕರಣದ ಅಗತ್ಯವಿದೆ. ನಮ್ಮ ಕನ್ನಡ ನಾಡಿನಲ್ಲಿ ಈ ದಿಟ್ಟ ಹೆಜ್ಜೆಯನ್ನು ಇಟ್ಟಿರುವುದು ಮುರುಘಾ ಶರಣರು. ಹಲವಾರು ಟೀಕೆ ಟಿಪ್ಪಣಿಗಳು ಬಂದಾಗಲೂ ಬಸವತತ್ವವನ್ನು ಎಂದಿಗೂ ಕೈಬಿಡುವುದಿಲ್ಲ ಎನ್ನುವ ದಿಟ್ಟ ನಿಲುವಿನಿಂದ  ಸಮಾಜದ ಎಲ್ಲಾ ವರ್ಗದ ಜನರಿಗೆ, ಧ್ವನಿ ಇಲ್ಲದವರಿಗೆ ಧ್ವನಿ, ಗುರುತಿಲ್ಲದವರಿಗೆ ಗುರುತು ನೀಡಲು ಹಾಗೂ ಎಲ್ಲಾ ಸಮಾಜದವರಿಗೆ ಗುರು ಪೀಠ ಸ್ಥಾಪನೆ ಮಾಡುವ ಮೂಲಕ ಹೊಸ ಮನ್ವಂತರವನ್ನು ತಂದಿದ್ದಾರೆ ಎಂದಿದ್ದಾರೆ.

ಪ್ರತಿರೋಧದ ನಡುವೆ ಪರಿವರ್ತನೆ: ಕಾಕತಾಳೀಯವೆಂದರೆ ಬಸವಣ್ಣನವರು ಪರಿವರ್ತನೆಯ ಕಾಲ 12 ನೇ ಶತಮಾನ, ಇಂದು  ಮುರುಘಾ ಶರಣರು ಪರಿವರ್ತನೆ ಮಾಡುವ ಕಾಲ 21 ನೇ ಶತಮಾನ. 12 ನೇ ಶತಮಾನದಲ್ಲಿ ಮಾಡಿದ್ದನ್ನು  21 ನೇ ಶತಮಾನದಲ್ಲಿ ಮಾಡುವ ಅವಶ್ಯಕತೆ ಕಂಡು ಮುರುಘಾ ಶರಣರು ಇದನ್ನು  ಮಾಡುತ್ತಿದ್ದಾರೆ.  12 ನೇ ಶತಮಾನದಲ್ಲಿಯೂ  ಇದೇ ಪರಿಸ್ಥಿತಿ ಇತ್ತು. ಸಾಕಷ್ಟು ಪ್ರತಿರೋಧದ ನಡುವೆ ಪರಿವರ್ತನೆ ಆಯಿತು. 21 ನೇ ಶತಮಾನದಲ್ಲಿಯೂ ಅಷ್ಟೇ ಪ್ರತಿರೋಧ ಇದೆ. ಸರ್ವರಿಗೂ ಸಮಾನತೆ ನೀಡುವ ತತ್ವವನ್ನು  ನಿರಂತರವಾಗಿ ಸಮಾಜದಲ್ಲಿ ಬೇರೂರಬೇಕೆಂಬ ಸಂಕಲ್ಪವನ್ನು ಈ ಸಮಾಜದಲ್ಲಿ 21 ನೇ ಶತಮಾನದಲ್ಲಿ ಮಾಡುವುದು ಬಹಳ ದೊಡ್ಡ ಸವಾಲು. ಆ ಸವಾಲನ್ನು ಅತ್ಯಂತ ಯಶಸ್ವಿಯಾಗಿ ಎದುರಿಸಿ ಅದರ ಬೀಜಾಂಕುರ ಮಾಡಿರುವುದು ಮುರುಘಾ ಶರಣರು ಎಂದು ಭಕ್ತಿ ಮತ್ತು ಹೆಮ್ಮೆಯಿಂದ ಹೇಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:'ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ'

ದೇಶದ ಅಂತಃಸತ್ವ ಚಾರಿತ್ರ್ಯವಂತ ಸಮಾಜ: ಈ ದೇಶಕ್ಕೆ 5000  ವರ್ಷಗಳ ಚರಿತ್ರೆ ಇದೆ.  ಬೇಕಾಗಿರುವುದು ಚಾರಿತ್ರ್ಯ. ಆರ್ಥಿಕ ಅಭಿವೃದ್ಧಿಯಿಂದ ದೇಶ ಮುಂದುವರೆಯುತ್ತದೆ. ದೇಶದ ಅಂತ:ಸತ್ವ ಚಾರಿತ್ರ್ಯವಂತ ಸಮಾಜ. ಪ್ರತಿಯೊಬ್ಬ ನಾಗರಿಕನೂ ಅದರ ಪಾಲನೆಯನ್ನು ಮಾಡಿದರೆ ದೇಶ ಉನ್ನತ ಸ್ಥಾನಕ್ಕೇರುತ್ತದೆ. ಚರಿತ್ರೆಯ ಜೊತೆಗೆ ಚಾರಿತ್ರ್ಯದ ಅವಶ್ಯಕತೆ ಇದೆ. ಈ ದೇಶದಲ್ಲಿ ಬಹಳಷ್ಟು ಆಚಾರ್ಯರಿದ್ದಾರೆ. ಬೇಕಾಗಿರುವುದು ಆಚರಣೆ. ನಮಗೆ ಆತ್ಮ ಶಕ್ತಿ ನೀಡುವ ತತ್ವಗಳನ್ನು ಹೇಳಿದ್ದಾರೆ. ಆದರೆ ಅದನ್ನು ಆಚರಣೆಗೆ ತರಬೇಕಿದೆ. ಇದನ್ನು ಅರ್ಥಮಾಡಿಕೊಂಡರೆ ಪರಮಪೂಜ್ಯರ ಧ್ಯೇಯಕ್ಕೆ ಸಾರ್ಥಕತೆ ಬರುತ್ತದೆ ಎಂದು ಹೇಳಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News