ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ವತಿಯಿಂದ “ಸಹಕಾರದ ಪ್ರಗತಿ – 2020” ಸಾಧನೆಗಳ ಕಿರುಹೊತ್ತಿಗೆಯನ್ನು  ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ತಮ್ಮ ನಿವಾಸ ಕಾವೇರಿಯಲ್ಲಿ ಭಾನುವಾರ  ಬಿಡುಗಡೆಗೊಳಿಸಿದರು. 


COMMERCIAL BREAK
SCROLL TO CONTINUE READING

ಇದೇ ವೇಳೆ ಮುಂದಿನ ವರ್ಷದ ಗುರಿ 30 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂಪಾಯಿ ಕೃಷಿ ಸಾಲವನ್ನು ವಿತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ (ST Somashekhar) ಅವರಿಗೆ ಈ ಸಂದರ್ಭದಲ್ಲಿ  ಮುಖ್ಯಮಂತ್ರಿಗಳು ಸೂಚಿಸಿದರು.


ಪ್ರಸಕ್ತ ಸಾಲಿನಲ್ಲಿ ರೈತರಿಗೆ (Farmers) 14500 ಕೋಟಿ ರೂಪಾಯಿ ಕೃಷಿ ಸಾಲ ನೀಡುವ ಗುರಿ ಇದೆ. ಈಗಾಗಲೇ 8,50,000 ರೈತರಿಗೆ ರೂ.5,600 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ರೈತರಿಗೆ ಕೃಷಿ ಚಟುವಟಿಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.


ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್,  ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ಉಪಸ್ಥಿತರಿದ್ದರು.