ಡಿಸಿಎಂ ಕನಸು ನನಸು ಮಾಡಿದ ಸಿಎಂ: 'ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ' ಸ್ಥಾಪನೆಗೆ ಗ್ರೀನ್ ಸಿಗ್ನಲ್

'ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ'ವನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ

Last Updated : Nov 17, 2020, 01:27 PM IST
  • 'ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ'ವನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ
  • ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು ಅಲ್ಲಿ ಅಂತಿಮ ತೀರ್ಮಾನ
  • ಆದೇಶದಲ್ಲಿ ನಿಗಮ ಸ್ಥಾಪನೆ,ಅನುದಾನ ಸೇರಿದಂತೆ ಯಾವುದೇ ಮಾಹಿತಿಯನ್ನು ತಿಳಿಸಿಲ್ಲ
ಡಿಸಿಎಂ ಕನಸು ನನಸು ಮಾಡಿದ ಸಿಎಂ: 'ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ' ಸ್ಥಾಪನೆಗೆ ಗ್ರೀನ್ ಸಿಗ್ನಲ್ title=

ಬೆಂಗಳೂರು: ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು ಇವರಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಹೀಗಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ 'ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ'ವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ(B.S.Yediyurappa) ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ? ಡಿಕೆಶಿ v/s ಬಿಜೆಪಿ ಟ್ವಿಟರ್ ವಾರ್!

ಆದರೆ ಆದೇಶದಲ್ಲಿ ನಿಗಮ ಸ್ಥಾಪನೆ,ಅನುದಾನ ಸೇರಿದಂತೆ ಯಾವುದೇ ಮಾಹಿತಿಯನ್ನು ತಿಳಿಸಿಲ್ಲ. ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು ಅಲ್ಲಿ ಅಂತಿಮ ತೀರ್ಮಾನ ಕೈಗೊಂಡು ಸರ್ಕಾರಿ ಆದೇಶ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ಡಿಸಿಎಂ ಲಕ್ಷ್ಮಣ್ ಸವದಿ ಅವರು ಬೆಂಗಳೂರಿನಲ್ಲಿ ಸಿಎಂ ಬಿಎಸ್ ವೈ ಭೇಟಿಯಾಗಿ ಅವರಿಗೆ ಮನವಿ ಮಾಡಿದ್ದರು.

ಬೆಂಗಳೂರು ಗಲಭೆಯ ಮಾಸ್ಟರ್ ಮೈಂಡ್ ಸಂಪತ್ ರಾಜ್ ಬಂಧನ; ತಿಂಗಳಾನುಗಟ್ಟಲೆ ಆತ ಅಡಗಿ ಕುಳಿತಿದ್ದೆಲ್ಲಿ ಗೊತ್ತೆ?

ಎರಡು ದಿನಗಳ ಹಿಂದಷ್ಟೇ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಆದೇಶ ಕೊಟ್ಟಿದ್ದ ಸರ್ಕಾರದ ಇದೀಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೂ ಗ್ರೀನ್ ಸಿಗ್ನಲ್ ಕೊಟ್ಟಿರುವುದು ಮಹತ್ವದ ಬೆಳವಣಿಗೆಯಾಗಿದೆ. ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಬೆನ್ನಲ್ಲೇ ಲಿಂಗಾಯತ ಸಮುದಾಯದ ಸಚಿವರು ಮಾತ್ರವಲ್ಲದೆ ಕಾಂಗ್ರೆಸ್ ನಿಯೋಗವೂ ಸಹ ತಮ್ಮ ಸಮುದಾಯಕ್ಕೆ ಶೇ.16 ರಷ್ಟು ಮೀಸಲು ನೀಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿತ್ತು.

ಬೆಂಗಳೂರಲ್ಲಿ ವರುಣನ ಆರ್ಭಟ: ರಾಜ್ಯದಲ್ಲಿ ಇನ್ನೂ 'ನಾಲ್ಕು ದಿನ' ಭಾರಿ ಮಳೆ..!

 

 

Trending News