ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗುರುಲಿಂಗಸ್ವಾಮಿ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.ಅವರಿಗೆ 46 ವರ್ಷ ವಯಸ್ಸಾಗಿತ್ತು.


COMMERCIAL BREAK
SCROLL TO CONTINUE READING

ಬೆಳಗ್ಗೆ ಜೀಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿದೆ.ಬಳಿಕ ಅವರನ್ನು ನಾಗರಭಾವಿ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.


ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಮಾರ್ಚ್ 9. 1976 ರಂದು ಜನಿಸಿದ ಗುರುಲಿಂಗಸ್ವಾಮಿ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದರು.


ತದನಂತರ ವಿಜಯ ಕರ್ನಾಟಕ, ವಿಜಯವಾಣಿ, ಟಿವಿ5, ಹಾಗೂ ಈಟಿವಿಯಲ್ಲಿ ಹಲವು ವರ್ಷಗಳ ಕಾಲ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು. ಇದಾದ ನಂತರ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ನಂತರ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.