ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಆರೋಗ್ಯ ವಿಚಾರಿಸಿದ ಸಿಎಂ ಕುಮಾರಸ್ವಾಮಿ

ಮಾರ್ಚ್ 15ರಂದು ಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಕುರುಬ ಸಮಾಜದ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಸಂದರ್ಭದಲ್ಲಿ ಹೆಚ್​. ವಿಶ್ವನಾಥ್​ ಅವರಿಗೆ ಹೃದಯಾಘಾತವಾಗಿತ್ತು. 

Updated: Mar 19, 2019 , 01:06 PM IST
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಆರೋಗ್ಯ ವಿಚಾರಿಸಿದ ಸಿಎಂ ಕುಮಾರಸ್ವಾಮಿ
Photo Courtesy: Facebook/@AHVishwanath

ಬೆಂಗಳೂರು: ಲಘು ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರನ್ನು ಇಲ್ಲಿನ ಜಯದೇವ ಆಸ್ಪತೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. 

ಇದಕ್ಕೂ ಮುನ್ನ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರೊಂದಿಗೆ ಮಾತನಾಡಿದ ಸಿಎಂ, ವಿಶ್ವ ನಾಥ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ಬಳಿಕ ಪಕ್ಷದ ಬೆಳವನ್ಗೆಗಳು ಮತ್ತು ಲೋಕ್ಸಬೇಹ್ ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆಗಳ ಬಗ್ಗೆಯೂ ಸಿಎಂ ಚರ್ಚಿಸಿದ್ದಾರೆ ಎನ್ನಲಾಗಿದೆ. 

ಮಾರ್ಚ್ 15ರಂದು ಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಕುರುಬ ಸಮಾಜದ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಸಂದರ್ಭದಲ್ಲಿ ಹೆಚ್​. ವಿಶ್ವನಾಥ್​ ಅವರಿಗೆ ಹೃದಯಾಘಾತವಾಗಿತ್ತು. ಬಳಿಕ ಅವರನ್ನು ಅಲ್ಲಿನ ಓಜೋನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡ ಬಳಿಕ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್ ಆಗಿ ಚಿಕಿತ್ಸೆ ಪಡೆಯುತಿದ್ದಾರೆ.

ಕಳೆದ ವರ್ಷ ರಕ್ತದೊತ್ತಡ, ಮಧುಮೇಹ ಹಾಗೂ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಹಲವು ದಿನಗಳ ಕಾಲ ವಿಶ್ರಾಂತಿ ಪಡೆದಿದ್ದರು. ಬಳಿಕ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಂಡು ಪಕ್ಷವನ್ನು ಮುನ್ನಡೆಸುತ್ತಿದ್ದರು.