ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಮೂರ್ಖ: ಯಡಿಯೂರಪ್ಪ

ಚುನಾವಣೆ ಬಳಿಕ ಈ ಸರ್ಕಾರ ಖಂಡಿತಾ ಉಳಿಯುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

Last Updated : Apr 12, 2019, 04:39 PM IST
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಮೂರ್ಖ: ಯಡಿಯೂರಪ್ಪ title=

ಗದಗ: ಹೆಚ್.ಡಿ.ಕುಮಾರಸ್ವಾಮಿ ಅವರು ತಾವೊಬ್ಬ ಮುಖ್ಯಮಂತ್ರಿ ಎಂಬುದನ್ನೂ ಮರೆತು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಜಿಲ್ಲೆಯ ರಾಜೇಂದ್ರಗಡ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲುತ್ತಾರೆಂಬ ಭಯ ಕುಮಾರಸ್ವಾಮಿ ಅವರನ್ನು ಕಾಡುತ್ತಿದೆ. ಸುಮಲತಾ ಗೆಲ್ಲುತ್ತಾರೆ ಎಂಬ ಕಾರಣಕ್ಕೆ ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಗುಂಡಾಗಿರಿ ನಡೆಸುತ್ತಿದ್ದಾರೆ. ಮಾಧ್ಯಮದವರ ಮೇಲೆ ಹಲ್ಲೆ ಆರೋಪ ಮಾಡಿದ್ದಾರೆ. ಇಂತಹ ಮುಖ್ಯಮಂತ್ರಿಯ ಮೇಲೆ ಜನತೆ ವಿಶ್ವಾಸ ಕಳೆದುಕೊಂಡು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಚುನಾವಣೆ ಬಳಿಕ ಈ ಸರ್ಕಾರ ಖಂಡಿತಾ ಉಳಿಯುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

Trending News