ಬೆಂಗಳೂರು: ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ 'ನಿರಂತರ ಹಗಲುಗನಸು' ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ವಿಜಯಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ಕುರಿತು ನ್ಯೂಜೆರ್ಸಿಯಿಂದಲೇ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, 'ಅಮೇರಿಕದ ನ್ಯೂಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಸ್ಥಾನದ ಭೂಮಿ ಪೂಜೆ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದಿದೆ. ರಾಜ್ಯದ ಎಲ್ಲಾ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ #BJP ಯ ಪ್ರಯತ್ನ 'ನಿರಂತರ ಹಗಲುಗನಸು' ಎಂದು ಹೇಳಿದ್ದಾರೆ.



ಇತ್ತೀಚೆಗಷ್ಟೇ ಜಿಂದಾಲ್ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಮೈತ್ರಿ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದ ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದ ಶಾಸಕರಾಗಿರುವ ಆನಂದ್ ಸಿಂಗ್, ದಿಢೀರ್ ಬೆಳವಣಿಗೆಯೊಂದರಲ್ಲಿ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.