ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜುಲೈ 2 ರಂದು ಅವರು ವಾಷಿಂಗ್ಟನ್ ಡಿ.ಸಿ.ಯಲ್ಲಿ ಕನ್ನಡಿಗರು ಏರ್ಪಡಿಸಿರುವ ಹೂಡಿಕೆದಾರರೊಂದಿಗಿನ ಅನೌಪಚಾರಿಕ ಸಭೆಯಲ್ಲಿ ಪಾಲ್ಗೊಂಡು, ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಚರ್ಚಿಸುವರು.


COMMERCIAL BREAK
SCROLL TO CONTINUE READING

ಈ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಜುಲೈ 1ರಂದು ನ್ಯೂಜೆರ್ಸಿಯಿಂದ ವಾಷಿಂಗ್ಟನ್ ಡಿ.ಸಿ.ಗೆ ತೆರಳಿದರು. ಜುಲೈ 5 ರಂದು ಒಕ್ಕಲಿಗರ ಪರಿಷತ್ ಅಮೆರಿಕಾದ ಸಮಾವೇಶದಲ್ಲಿ ಭಾಗವಹಿಸಿ, ಬೆಂಗಳೂರಿಗೆ ಹಿಂದಿರುಗುವರು.


ವಾಷಿಂಗ್ಟನ್ ಡಿ.ಸಿ.ಗೆ ತೆರಳುವ ಮುನ್ನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯದ ಉಸ್ತುವಾರಿ ವಹಿಸಿರುವ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ. ರಾಜ್ಯ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಈ ಮುಖಂಡರು ಮುಖ್ಯಮಂತ್ರಿಗಳಿಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.