ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಹಾಸನ ಜಿಲ್ಲೆಗೆ ಅಗ್ರ ಸ್ಥಾನ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ದೊರೆತಿದೆ. ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಅಲ್ಲದೆ, ಸರ್ಕಾರಿ ಶಾಲೆಗಳಲ್ಲಿ ಶೇ.100 ಫಲಿತಾಂಶ ಬಂದಿರುವುದು ಹೆಮ್ಮೆಯ ಸಂಗತಿಯಾಗಿದೆ. 


COMMERCIAL BREAK
SCROLL TO CONTINUE READING

ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇ ಬಗ್ಗೆ ಟ್ವೀಟ್ ಮಾಡಿರುವ ಅವರು, ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಕಳೆದ ವರ್ಷಕ್ಕಿಂತ ಸ್ವಲ್ಪ ಹೆಚ್ಚಾಗಿರುವುದು ಸಂತೋಷದ ವಿಷಯ. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು, ಶಾಲೆಗಳಿಗೆ ಅಭಿನಂದನೆಗಳು. ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಸೆ ಹೊಂದುವ ಅಗತ್ಯವಿಲ್ಲ. ಮುಂದಿನ ಬಾರಿ ಹೆಚ್ಚಿನ ಪರಿಶ್ರಮ ವಹಿಸಿ ಪರೀಕ್ಷೆ ಎದುರಿಸಿ, ಯಶಸ್ವಿಯಾಗಿ ಎಂದು ಸಿಎಂ ಹೇಳಿದ್ದಾರೆ.



ಅಷ್ಟೇ ಅಲ್ಲದೆ, ತಂತ್ರಜ್ಞಾನದ ನೆರವು ಹಾಗೂ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ದೊರೆತಾಗ ಪರಿಣಾಮಕಾರಿ ಕಾರ್ಯನಿರ್ವಹಣೆ ಸಾಧ್ಯ ಎನ್ನುವುದಕ್ಕೆ ಈ ವರ್ಷದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷಾ ಪ್ರಕ್ರಿಯೆ ನಿರ್ವಹಣೆ ಉತ್ತಮ ನಿದರ್ಶನ. ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ಯಾವುದೇ ಗೊದಲಕ್ಕೆ ಆಸ್ಪದ ನೀಡದೇ ಯಶಸ್ವಿಯಾಗಿ ನಿರ್ವಹಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೂ ಅಭಿನಂದನೆಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. 




ಕಳೆದ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಶೇಕಡ 71.93 ಬಂದಿತ್ತು. ಆದರೆ ಈ ಬಾರಿ 73.70 ಫಲಿತಾಂಶ ಬಂದಿದೆ. ಪರೀಕ್ಷೆಯಲ್ಲಿ ಶೇ 79.59 ರಷ್ಟು ಬಾಲಕಿಯರು ಉತೀರ್ಣರಾಗಿದ್ದು, ಶೇ.68.46 ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ.‌ ಪೂರಕ ಪರೀಕ್ಷೆ ಜೂನ್ 21ರಿಂದ ನಡೆಯಲಿದೆ.