ಮೈಸೂರು: ಮಹದೇವಪುರ ಮುಖ್ಯ ರಸ್ತೆಯಲ್ಲಿರುವ ಭಾರತ್ ನಗರ ಕಾಲೋನಿಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಇಡೀ ಕಾಲೋನಿಯನ್ನು ಕಾಲ್ನಡಿಗೆಯಲ್ಲೇ ಸುತ್ತಿದ ಅವರು ಸ್ಥಳೀಯ ನಿವಾಸಿಗಳ ಅಹವಾಲು ಸ್ವೀಕರಿಸಿದರು.



COMMERCIAL BREAK
SCROLL TO CONTINUE READING

ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಭಾರತ್ ನಗರ ಕಾಲೋನಿಗೆ ಅನಿರೀಕ್ಷಿತವಾಗಿ ಆಗಮಿಸಿದ ಮುಖ್ಯಮಂತ್ರಿಯವರನ್ನು ಕಂಡು ಅಚ್ಚರಿಗೊಳಗಾದ ಭಾರತ್ ನಗರದ ನಿವಾಸಿಗಳು ಸಂತಸದಿಂದ ಜಯಘೋಷ ಮೊಳಗಿಸಿದರು. 


ಇಡೀ ಕಾಲೋನಿಯನ್ನು ಕಾಲ್ನಡಿಗೆಯಲ್ಲಿ ಸುತ್ತಿದ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ವರುಣಾ ವಿಧಾನಸಭೆ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷರಾದ ಡಾ. ಯತೀಂದ್ರ, ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ಸಾಥ್ ನೀಡಿದರು.