ಅಮಿತ್ ಶಾ ಬರಿಗೈಯಲ್ಲಿ ಬಂದಿದ್ದಾರೆ, ಬಡವರು-ರೈತರ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ: ಸಿಎಂ ಸಿದ್ದರಾಮಯ್ಯ

Siddaramaiah statement about Amit Shah: ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ  ಮಾತನಾಡಿದರು.

Written by - Prashobh Devanahalli | Edited by - Bhavishya Shetty | Last Updated : Feb 11, 2024, 04:02 PM IST
    • ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ
    • ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ
    • ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ
ಅಮಿತ್ ಶಾ ಬರಿಗೈಯಲ್ಲಿ ಬಂದಿದ್ದಾರೆ, ಬಡವರು-ರೈತರ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ: ಸಿಎಂ ಸಿದ್ದರಾಮಯ್ಯ title=
CM Siddaramaiah

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ  ಮಾತನಾಡಿದರು.

ಇದನ್ನೂ ಓದಿ: ಮಹಿಳೆಯರ ದೇಹದ ಈ ಭಾಗದಲ್ಲಿ ಕೂದಲು ಬೆಳೆದರೆ ಅದು ಸಿರಿವಂತಿಕೆ ಆಗಮನದ ಸಂಕೇತ

ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರ ಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು.  ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ಎಂ.ಎನ್. ನರೇಗಾ ಯೋಜನೆಯಡಿ  150 ಮಾನವದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ. ಆದರೆ ಕೇಂದ್ರ ಸರ್ಕಾರದವರು ಅನುಮತಿ ನೀಡದೇ,  2-3 ಪತ್ರ ಬರೆದಿದ್ದರೂ  ಉತ್ತರ ನೀಡಿಲ್ಲ ಎಂದರು.

“ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು”

ನಿರ್ಮಲಾ ಸೀತಾರಾಮನ್  ಅವರು ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಈಗ ಅವರು ಅವರ ಜೊತೆ ಸೇರಿದ್ದಾರೆ. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದ ದೇವೇಗೌಡರು ಈಗೇನು ಹೇಳುತ್ತಿದ್ದಾರೆ.  ಅವರು ಯಜಮಾನರು,  ಮಾಜಿ ಪ್ರಧಾನಿಗಳಾಗಿದ್ದವರು ಹೀಗೆ ಹೇಳಬಾರದು. ಬಿಜೆಪಿಯೊಂದಿಗೆ  ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರು ಮಾಡಿದ ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು” ಎಂದರು.

ಇದನ್ನೂ ಓದಿ:  ಟೀಂ ಇಂಡಿಯಾಗೆ ಸಿಕ್ಕೇಬಿಟ್ರು ಜೂನಿಯರ್ ಧೋನಿ! 19ರ ಹರೆಯದ ಈ ಅದ್ಭುತ ಆಟಗಾರನಿಗೆ CSKಯಲ್ಲಿ ಸ್ಥಾನ

“ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಗೆಲ್ಲಲಿದೆ”

ಚುನಾವಣೆ ರಣಕಹಳೆ ಮೈಸೂರಿನಿಂದಲೇ ಅಮಿತ್ ಶಾ ಮೊಳಗಿಸುತ್ತಿರುವ ಬಗ್ಗೆ  ಮಾತನಾಡಿ ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News