ಬೆಂಗಳೂರು: ವಿಧಾನ ಸೌಧ ದಲ್ಲಿ ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಗೆ ಭಾಗಿಯಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರನ್ನು ಎದುರಿಸಲು ಎಲ್ಲ ಪಕ್ಷಗಳು ಒಟ್ಟಾಗುತ್ತಿವೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ.


COMMERCIAL BREAK
SCROLL TO CONTINUE READING

ವಿಧಾನಸಬಾ ಚುನಾವಣಾ ಸಂದರ್ಭದಲ್ಲಿ ಮೋದಿಯವರು 28 ಕಡೆ ಪ್ರವಾಸ ಕೈಗೊಂಡಿದ್ದು, ಅವರು ಬಂದ ಕಡೆಗಳೆಲ್ಲಾ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಸ್ಪಷ್ಟವಾದ ಬಹುಮತ ದೊರೆಯಲು ಸಾದ್ಯವಿಲ್ಲ ಎಂದರು.


ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ- ಸಿದ್ದರಾಮಯ್ಯ


ಪಕ್ಷವನ್ನು ಉಳಿಸುವ ನಿಟ್ಟಿನಲ್ಲಿ ಜೆಡಿಎಸ್ ತನ್ನ ಸಿದ್ಧಾಂತವನ್ನು ಬಲಿ ಕೊಡುತ್ತಿದೆ :
ಜೆಡಿಎಸ್ ನ ಸಿದ್ದಾಂತವಿಲ್ಲದ ಪಕ್ಷಗಳು ಒಂದೆಡೆ ಸೇರುತ್ತಿರುವುದರಿಂದ, ನಾವು ಎನ್ ಡಿ ಎ ಕಡೆ ಹೋದರೆ ತಪ್ಪಲ್ಲ, ಪಕ್ಷ ಉಳಿಸಿಕೊಳ್ಳುವುದು ಮುಖ್ಯ ಎಂದು ಜೆಡಿಎಸ್ ನ ಕುಮಾರಸ್ವಾಮಿಯವರು ಹೇಳುತ್ತಿರುವ ಬಗ್ಗೆ ಉತ್ತರ ನೀಡುತ್ತಾ , ಜೆಡಿಎಸ್ ಗೆ ಸಿದ್ಧಾಂತವೇ ಇಲ್ಲ. ಬಿಜೆಪಿಗೆ ಬೆಂಬಲ ಸೂಚಿಸಿದ ನಂತರ ಅವರ ಜಾತ್ಯಾತೀತತೆ ಏನಾಯಿತು. ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಸಿದ್ಧಾಂತವನ್ನು ಬಲಿ ಕೊಡುತ್ತಿದ್ದಾರೆ ಎಂದರ್ಥ ಎಂದರು.


ಇದನ್ನೂ ಓದಿ: ಬೆಳಗಾವಿಯಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ..!


ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿಯೂ 21 ಪಕ್ಷಗಳ ಮುಖಂಡರು ಬಂದರೂ ಪ್ರಯೋಜನವಾಗಲಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರೆನ್ನಲ್ಲಾ ಕರೆದಿದ್ದು ಕುಮಾರಸ್ವಾಮಿಯವರೇ ,  ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರು ಆ ಸಂಬಂಧವನ್ನು ಮುಂದುವರೆಸಲಿಲ್ಲ ಎಂದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.