ಬಾಗಲಕೋಟೆ: ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲೀಂರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿ ಘರ್ಜಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Seetha Rama: ಸಿಹಿಯ ಭೇಟಿಯಿಂದ ಸತ್ಯ ಬಯಲು: ಸತ್ಯ ಮುಚ್ಚಿಟ್ಟಿದ್ದಕ್ಕೆ ಕೆಂಡಾಮಂಡಲವಾದ ಸೂರಿ ತಾತ!


ಬಾಗಲಕೋಟೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥ ಸಂಯುಕ್ತ ಪಾಟೀಲ್ ಗೆಲುವಿಗೆ ಕರೆ ನೀಡಲು ಕರೆದಿದ್ದ ಬೃಹತ್ ಜನ ಸಮಾವೇಶದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.


ದೇಶದಲ್ಲಿ 102 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆದ ಬಳಿಕ ಬಿಜೆಪಿ ಸೋಲುತ್ತದೆ ಎನ್ನುವ ಸುಳಿವು ಮೋದಿಯವರಿಗೆ ಸ್ಪಷ್ಟವಾಗಿ ಸಿಕ್ಕಿದೆ. ಈ ಕಾರಣಕ್ಕೆ ಭಯಾನಕ ಸುಳ್ಳು ಹೇಳ್ಕೊಂಡು ತಿರುಗುತ್ತಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕೊಡುತ್ತಿದ್ದಾರೆ ಎನ್ನುವ ಸುಳ್ಳನ್ನು ಹೇಳುವ ಮೂಲಕ ಹಿಂದುಳಿದವರನ್ನು ಮುಸ್ಲೀಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಎಚ್ಚರ ವಹಿಸಿ ಎಂದು ಹಿಂದುಳಿದ ಜಾತಿ-ಸಮುದಾಯಗಳಿಗೆ ಎಚ್ಚರಿಸಿದರು.


ಮೋದಿ ಮೀಸಲಾತಿ ವಿಚಾರದಲ್ಲೂ ಸುಳ್ಳು ಹೇಳ್ತಿದಾರೆ. ಇವರಿಗೆ ಸಂವಿಧಾನದ ತಿಳಿವಳಿಕೆ ಇಲ್ಲ. ಈ ಮಟ್ಟದ ಸುಳ್ಳು ಹೇಳುವ ಇವರಿಗೆ ನಾಚಿಕೆ, ಮಾನ ಮರ್ಯಾದೆ ಏನಾದರೂ ಇದೆಯ? ಎಂದು  ಪ್ರಶ್ನಿಸಿದರು.


ಇದನ್ನೂ ಓದಿ: ಮುಂಜಾನೆ ಎದ್ದಂತೆ ಮೊಸರಿಗೆ ಈ ಕಪ್ಪು ಬೀಜ ಬೆರೆಸಿ ತಿನ್ನಿ: ದಿನಪೂರ್ತಿ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಯಾವ ಔಷಧಿಯೂ ಬೇಕಿಲ್ಲ


ಮಂಡಲ್ ವರದಿ ವಿರೋಧಿಸಿ ಹಿಂದುಳಿದವರ ಹಾದಿ ತಪ್ಪಿಸಿ ಆತ್ಮಹತ್ಯೆಗೆ ದೂಡಿದ್ದು ಇದೇ ಬಿಜೆಪಿ. ಹಿಂದುಳಿದವರ ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದ ರಾಮಾಜೋಯಿಸ್ ಬಿಜೆಪಿಯವರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಾಗ ಅದನ್ನು ವಿರೋಧಿಸಿ ಪ್ರತಿಭಟಿಸಿದ್ದು ಇದೇ ಬಿಜೆಪಿ. ಹಿಂದುಳಿದವರ, ಮಹಿಳೆಯರ ವಿರೋಧಿಯಾಗಿರುವ ಇವರು ಈಗ ಹಿಂದುಳಿದವರನ್ನು ಮುಸ್ಲೀಮರ ವಿರುದ್ಧ ಎತ್ತಿ ಕಟ್ಟಿ ಏಕ ಕಾಲದಲ್ಲಿ ಎರಡೂ ಸಮುದಾಯಗಳ ಜೀವಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.‌


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.