ಕುಡತಿನಿ ಭೂ ಸಂತ್ರಸ್ತರ ಪ್ರತಿಭಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದನೆ; ಡಿ.14ರಂದು ಸಿಎಂ ಸಭೆ

ಕುಡತಿನಿ ಬಳಿ 361 ದಿನಗಳಿಂದ ಪ್ರತಿಭಟನಾ ನಿರತ ಭೂ ಸಂತ್ರಸ್ತರ ಹೋರಾಟದ ಕುರಿತ ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಸ್ ಅವರು ಸುವರ್ಣಸೌಧದಲ್ಲಿ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ಪಂದಿಸಿ, ಡಿಸೆಂಬರ್ 14ರ ಗುರುವಾರ ಮಧ್ಯಾಹ್ನ 3.30ಕ್ಕೆ ಕೊಠಡಿ ಸಂಖ್ಯೆ 315 ರಲ್ಲಿ ವಿಶೇಷ ಸಭೆ ಕರೆದಿದ್ದಾರೆ.

Written by - Manjunath N | Last Updated : Dec 14, 2023, 12:03 AM IST
  • ಬೃಹತ್ ಕೈಗಾರಿಕೆಗಳ ಪ್ರಾರಂಭಕ್ಕೆ ಸಾವಿರಾರು ಎಕರೆ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ದಶಕಗಳು ಕಳೆದರೂ ಕೈಗಾರಿಕೆಗಳು ಪ್ರಾರಂಭವಾಗಿಲ್ಲ.
  • ಭೂ ನಿರಾಶ್ರಿತರು ಕುಡತಿನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸದನದಲ್ಲಿ ಡಿಸೆಂಬರ್ 5, 2023 ರಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದನ್ನು ನಾವಿಲ್ಲಿ ಸ್ಮರಿಸಬಹುದು.
ಕುಡತಿನಿ ಭೂ ಸಂತ್ರಸ್ತರ ಪ್ರತಿಭಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದನೆ; ಡಿ.14ರಂದು ಸಿಎಂ ಸಭೆ title=

ಬಳ್ಳಾರಿ: ಕುಡತಿನಿ ಬಳಿ 361 ದಿನಗಳಿಂದ ಪ್ರತಿಭಟನಾ ನಿರತ ಭೂ ಸಂತ್ರಸ್ತರ ಹೋರಾಟದ ಕುರಿತ ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಸ್ ಅವರು ಸುವರ್ಣಸೌಧದಲ್ಲಿ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ಪಂದಿಸಿ, ಡಿಸೆಂಬರ್ 14ರ ಗುರುವಾರ ಮಧ್ಯಾಹ್ನ 3.30ಕ್ಕೆ ಕೊಠಡಿ ಸಂಖ್ಯೆ 315 ರಲ್ಲಿ ವಿಶೇಷ ಸಭೆ ಕರೆದಿದ್ದಾರೆ.

ಇದನ್ನೂ ಓದಿ: ಪೂಜಾ ಗಾಂಧಿ ತಂಗಿ ಯಾರು ಗೊತ್ತೇ, ಇವರು ಕೂಡ ಕನ್ನಡದ ಟಾಪ್‌ ನಟಿ! 

ಕುಡತಿನಿಯಲ್ಲಿ ಅರ್ಸೆಲ್ಲರ್ ಮಿತ್ತಲ್, ಉತ್ತಮ್‍ಗಾಲ್ವಾ ಮತ್ತು ಎನ್‍ಎಂಡಿಸಿ ಬೃಹತ್ ಕೈಗಾರಿಕೆಗಳ ಪ್ರಾರಂಭಕ್ಕೆ ಸಾವಿರಾರು ಎಕರೆ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ದಶಕಗಳು ಕಳೆದರೂ ಕೈಗಾರಿಕೆಗಳು ಪ್ರಾರಂಭವಾಗಿಲ್ಲ. ಭೂ ನಿರಾಶ್ರಿತರು ಕುಡತಿನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸದನದಲ್ಲಿ ಡಿಸೆಂಬರ್ 5, 2023 ರಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ʻಬ್ಯಾಚುಲರ್ ಪಾರ್ಟಿʼ ಕೊಡಲು ರೆಡಿಯಾದ ರಕ್ಷಿತ್ ಶೆಟ್ಟಿ! 

ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರು, ಡಿಸೆಂಬರ್ 5ರಂದು ಸದನದ ಮೇಲ್ಮನೆಯಲ್ಲಿ `ಕುಡತಿನಿ ಬಳಿ 361 ದಿನಗಳಿಂದ ಪ್ರತಿಭಟನಾ ನಿರತ ಭೂ ಸಂತ್ರಸ್ತರ ಹೋರಾಟಗಾರರ ಕುರಿತು ತುರ್ತಾಗಿ ಗಮನಹರಿಸಬೇಕು' ಎಂದು ಮನವಿ ಮಾಡಿದ್ದರು. ಈ ಕುರಿತು ಸರ್ಕಾರ ತುರ್ತು ಸ್ಪಂದನೆ ನೀಡಿರುವುದ ಸ್ವಾಗತಾರ್ಹ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಡಿಸೆಂಬರ್ 14ರ ಗುರುವಾರ ಮಧ್ಯಾಹ್ನ 3.30ಕ್ಕೆ ಕೊಠಡಿ ಸಂಖ್ಯೆ 315 ರಲ್ಲಿ ವಿಶೇಷ ಸಭೆಗೆ ಸಂಡೂರು ಶಾಸಕ ಇ.ತುಕಾರಾಂ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಅಭಿವೃದ್ಧಿ ಸಚಿವರು, ಆರ್ಥಿಕ, ಕಂದಾಯ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಬಳ್ಳಾರಿ ಜಿಲ್ಲಾಧಿಕಾರಿಗಳು ಹಾಜರಾತಿ ಕಡ್ಡಾಯ ಮಾಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News