ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಇಂದು ದೇವನಹಳ್ಳಿ ಜೂನಿಯರ್ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ಬಾಲ್ಯ ವಿವಾಹ ನಿಷೇದ ಕಾಯ್ದೆಯ ಸಮರ್ಪಕ ಅನುಷ್ಠಾನ ಮತ್ತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಸಂಬಂಧ ವಿಡಿಯೋ ಆನ್‌ವೀಲ್ಸ್ ಸಂಚಾರಿ ವಾಹನದ ಮುಖಾಂತರ ಪ್ರಚಾರ ಕಾರ್ಯಕ್ರಮ ಹಾಗೂ ಬಾಲ್ಯ ವಿವಾಹ ನಿಷೇಧ ಅಭಿಯಾನಕ್ಕೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ (LN Nisarga Narayanswamy) ಚಾಲನೆ ನೀಡಿದರು.


COMMERCIAL BREAK
SCROLL TO CONTINUE READING

ಬಾಲ್ಯ ವಿವಾಹವನ್ನು (Child Marriage) ಸಂಪೂರ್ಣವಾಗಿ ತಡೆಯುವುದು ಸಮಾಜದಲ್ಲಿನ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಅಭಿವೃದ್ಧಿಗೆ ಮಾರಕವಾಗಿರುವ ಬಾಲ್ಯ ವಿವಾಹ ಎಂಬ ಅನಿಷ್ಟ ಪದ್ಧತಿ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ನಾರಾಯಣಸ್ವಾಮಿ ತಿಳಿಸಿದರು.


ಈ ಕುರಿತಂತೆ ಮಾತನಾಡಿದ ಶಾಸಕ ನಾರಾಯಣಸ್ವಾಮಿ, ಬಾಲ್ಯ ವಿವಾಹವು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹ ನಿಷೇಧಕ ಕಾಯ್ದೆ (Child Marriage Prohibition Act)-2006ರ ಪ್ರಕಾರ 18 ವರ್ಷದೊಳಗಿನ ಯಾವುದೇ ಹೆಣ್ಣುಮಗುವಿಗೆ ಹಾಗೂ 21ವರ್ಷದೊಳಗಿನ ಯಾವುದೇ ಗಂಡು ಮಗುವಿಗೆ ಮದುವೆಯಾದಲ್ಲಿ ಅದು ಬಾಲ್ಯ ವಿವಾಹ. ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕ್ಕೆ ಕರೆ ಮಾಡಿದರೆ ಶೀಘ್ರ ಸ್ಪಂದಿಸಿ, ಅಂತಹವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.


ಇದನ್ನೂ ಓದಿ- ಮೇಲುಕೋಟೆಯ ಕಲ್ಯಾಣಿಯಲ್ಲಿ ವಿಜೃಂಭಣೆಯಿಂದ ಜರುಗಿದ ಚೆಲುವನಾರಾಯಣ ತೆಪ್ಪೋತ್ಸವ


ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಹಿಂದಿನಿಂದಲೂ ಆಚರಣೆಯಲ್ಲಿರುವ ಬಾಲ್ಯ ವಿವಾಹವು ಪದ್ಧತಿಯಿಂದಾಗಿ, ಬಡತನ, ಅನಕ್ಷರತೆ, ಆರ್ಥಿಕ ಸಮಸ್ಯೆಗಳಿಗೆ ಪ್ರಮುಖ ಕಾರಣಗಳಾಗಿದೆ. ಬಾಲ್ಯ ವಿವಾಹದಿಂದ ಮಕ್ಕಳ ಹಕ್ಕುಗಳಿಗೆ ಚ್ಯುತಿಯಾಗುತ್ತಿದೆ. ಮಕ್ಕಳು ಅವರ ಬಾಲ್ಯವನ್ನು ಸ್ವಚ್ಛಂದವಾಗಿ ಅನುಭವಿಸಲು ಬಿಟ್ಟಾಗ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಹಾಗೂ ಉತ್ತಮ ಸಮಾಜ ನಿರ್ಮಾಣಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು. 


ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣ್ಣಪ್ಪ ಅವರು ಮಾತನಾಡಿ ಬಾಲ್ಯ ವಿವಾಹದಿಂದ ಬಹಳಷ್ಟು ದುಷ್ಪರಿಣಾಮಗಳಿದ್ದು, ಅದನ್ನು ತಡೆಗಟ್ಟಿ ಮಕ್ಕಳ ಬಾಳನ್ನು ಬೆಳಗಿಸುವ ಮೂಲಕ ಬಾಲ್ಯವಿವಾಹ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸೋಣ ಎಂದು ಕರೆ ನೀಡಿದರು.


ಇದನ್ನೂ ಓದಿ- ಉಕ್ರೇನ್ ನಿಂದ ಬೆಂಗಳೂರಿಗೆ ಬಂದಿಳಿದ 37 ವಿದ್ಯಾರ್ಥಿಗಳು, ಮಕ್ಕಳನ್ನು ಕಂಡು ಕಣ್ಣೀರಾದ ಪೋಷಕರು


ಈ ವೇಳೆಯಲ್ಲಿ ಬಾಲ್ಯ ವಿವಾಹ ನಿಷೇಧ ಜಾಗೃತಿ ಕುರಿತ ಭಿತ್ತಿಪತ್ರ ಹಾಗೂ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಸಹಿ ಸಂಗ್ರಹ ಅಭಿಯಾನವನ್ನು ಮಾಡಲಾಯಿತು. ಪ್ರತಿಜ್ಞಾವಿಧಿ ಸ್ವೀಕಾರ ಮಾಡಲಾಯಿತು. ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಾಣ ಮಾಡಿದರು.


ಕಾರ್ಯಕ್ರಮದಲ್ಲಿ ದೇವನಹಳ್ಳಿ ಪುರಸಭಾ ಅಧ್ಯಕ್ಷರಾದ ಗೋಪಮ್ಮ, ಉಪಾಧ್ಯಕ್ಷರಾದ ಗೀತಾ ಶ್ರೀಧರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.