ಚಾಮರಾಜನಗರ:  ಅಪ್ರಾಪ್ತೆ ಬಾಲಕಿಯನ್ನು ಪರಿಚಯಿಸಿಕೊಂಡು ಬಲವಂತದಿಂದ ವಿವಾಹ ಮಾಡಿಕೊಂಡಿದ್ದ ಬಸ್ ಕಂಡಕ್ಟರ್ ಹಾಗೂ ಮದುವೆ ಮಾಡಿಸಿದ್ದ ಇಬ್ಬರು ಅರ್ಚಕರಿಗೆ ಕಠಿಣ ಶಿಕ್ಷೆ ವಿಧಿಸಿ ಮಕ್ಕಳ ಸ್ನೇಹಿ ಹಾಗೂ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.


COMMERCIAL BREAK
SCROLL TO CONTINUE READING

ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿದ್ದ ಕೆಎಸ್ಆರ್ ಟಿಸಿ ಕಂಡಕ್ಟರ್ ರವಿಕುಮಾರ್ ಹಾಗೂ ಆತನ ಮದುವೆಗೆ ಸಹಕಾರ ನೀಡಿದ್ದ ಅರ್ಚಕರಾದ ಕೆ.ಎನ್.ಶಾಸ್ತ್ರಿ ಮತ್ತು ರಾಜೇಶ್ವರ್ ಶಾಸ್ತ್ರಿ ಶಿಕ್ಷೆಗೊಳಗಾದ ಅಪರಾಧಿಗಳು.‌ 


ಇದನ್ನೂ ಓದಿ- ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ವಿರುದ್ಧ Pay Mayor ಅಭಿಯಾನ..!


ಕಾಲೇಜಿಗೆ ತೆರಳುತ್ತಿದ್ದ ಬಾಲಕಿಯನ್ನು ಪರಿಚಯಿಸಿಕೊಂಡಿದ್ದ ಕಂಡಕ್ಟರ್ 2017 ರ ನವೆಂಬರ್ 23 ರಂದು ಕಾರಿನಲ್ಲಿ ಬಲವಂತವಾಗಿ ಹತ್ತಿಸಿಕೊಂಡು ಶ್ರೀರಂಗಪಟ್ಟಣದಲ್ಲಿ ವಿವಾಹ ಮಾಡಿಕೊಂಡಿದ್ದ, ಈತನಿಗೆ ಇಬ್ಬರು ಅರ್ಚಕರು ಸಹಕಾರ ಕೊಟ್ಟು ವಿವಾಹ ಮಾಡಿಸಿದ್ದರು.


ಇದನ್ನೂ ಓದಿ- ಪಿಎಫ್ಐ ನಿಷೇಧ: ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಸಚಿವ ನಿರಾಣಿ


ವಿವಾಹವಾದ ಬಳಿಕ ಲೈಂಗಿಕ ದೌರ್ಜನ್ಯ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೊದಲನೇ ಆರೋಪಿ ರವಿಕುಮಾರ್ ಗೆ 3 ವರ್ಷ ಶಿಕ್ಷೆ ಇದರಲ್ಲಿ ಒಂದು ವರ್ಷ ಕಠಿಣ ಶಿಕ್ಷೆ ಮತ್ತು ಅರ್ಚಕರುಗಳಿಗೆ ಒಂದು ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ಎ.ಸಿ.ನಿಶಾರಾಣಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.