ಬೆಂಗಳೂರು: ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 


COMMERCIAL BREAK
SCROLL TO CONTINUE READING

ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು  ಕಾಯಕ  ಪದ್ಧತಿಯನ್ನು ಹೇಳಿದರು. 


ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು. 


ಇದನ್ನೂ ಓದಿ- Bengaluru: ಚಿಂದಿ ಆಯುವ ವ್ಯಕ್ತಿಗೆ ಸಿಕ್ತು 25 ಲಕ್ಷ ಅಮೆರಿಕನ್ ಡಾಲರ್..!


ಶೂದ್ರ ಮತ್ತು ಮಹಿಳೆಯರನ್ನು ಶತ- ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು ಎಂದವರು ತಿಳಿಸಿದರು. 


960000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು ಎಂದರು. 


ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ ಆಗಿದೆ. 


ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಈ ವಿಭಜಕರು ಶೂದ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆ ಬರುವುದನ್ನು ವಿರೋಧಿಸುತ್ತಾರೆ. ಆದ್ದರಿಂದ  ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವವರನ್ನು ನಾವು ವಿರೋಧಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. 


ಇದನ್ನೂ ಓದಿ- Rain alert: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!


ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಿಂದ ನಾವು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲ ಆಗುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಇದೇ ವೇಳೆ ಸಿಎಂ ತಿಳಿಸಿದರು. 


ಡಿಸಿಎಂ ಡಿ.ಕೆ.ಶಿವಕುಮಾರ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಆಹಾರ ಸಚಿವರಾದ ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರುಗಳು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.