ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು: ಪರಿಸರ ಸಚಿವ ಈಶ್ವರ ಖಂಡ್ರೆ

Environment Minister Eshwara Khandre: ಸುತ್ತೂರು ಆದಿ ಶಿವರಾತ್ರೀಶ್ವರ ಶಿವಯೋಗಿಯವರ ಜಾತ್ರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಮೇಳಕ್ಕೆ ಚಾಲನೆ ನೀಡಿ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಗಿಡದಲ್ಲಿ ಹೂ ಬಿಡುವುದು ಪ್ರಕೃತಿ, ಅದನ್ನು ಕಿತ್ತು ಎಸೆದರೆ ವಿಕೃತಿ, ಅದನ್ನು ದಾರದಿಂದ ಪೂಣಿಸಿದರೆ ಆಗುತ್ತದೆ ಆಕೃತಿ, ಆ ಆಕೃತಿಯನ್ನು ದೇವರಿಗೆ ಅರ್ಪಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿದರು.

Written by - Prashobh Devanahalli | Edited by - Bhavishya Shetty | Last Updated : Feb 10, 2024, 04:59 PM IST
    • ಸುತ್ತೂರು ಆದಿ ಶಿವರಾತ್ರೀಶ್ವರ ಶಿವಯೋಗಿಯವರ ಜಾತ್ರಾ ಮಹೋತ್ಸವ
    • ಜಾತ್ರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಮೇಳಕ್ಕೆ ಚಾಲನೆ ನೀಡಿದ ಈಶ್ವರ ಖಂಡ್ರೆ
    • ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ
ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು: ಪರಿಸರ ಸಚಿವ ಈಶ್ವರ ಖಂಡ್ರೆ title=
Environment Minister Eshwara Khandre

ಸುತ್ತೂರು: ಇಂದಿನ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಮಹತ್ವ ತಿಳಿಸಿ, ನಮ್ಮತನ, ನಮ್ಮ ಸಂಸ್ಕೃತಿ ಉಳಿಸುವ ಕೆಲಸವನ್ನು ಪಾಲಕರು ಮಾಡಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ.

ಇದನ್ನೂ ಓದಿ: EPFO 6 ಕೋಟಿ ಚಂದಾದಾರರಿಗೊಂದು ಭರ್ಜರಿ ಸಂತಸದ ಸುದ್ದಿ, PF ಬಡ್ಡಿ ದರದಲ್ಲಿ ಭಾರಿ ಹೆಚ್ಚಳ!

ಸುತ್ತೂರು ಆದಿ ಶಿವರಾತ್ರೀಶ್ವರ ಶಿವಯೋಗಿಯವರ ಜಾತ್ರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಮೇಳಕ್ಕೆ ಚಾಲನೆ ನೀಡಿ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಗಿಡದಲ್ಲಿ ಹೂ ಬಿಡುವುದು ಪ್ರಕೃತಿ, ಅದನ್ನು ಕಿತ್ತು ಎಸೆದರೆ ವಿಕೃತಿ, ಅದನ್ನು ದಾರದಿಂದ ಪೂಣಿಸಿದರೆ ಆಗುತ್ತದೆ ಆಕೃತಿ, ಆ ಆಕೃತಿಯನ್ನು ದೇವರಿಗೆ ಅರ್ಪಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿದರು.

ಇಂತಹ ಉದಾತ್ತ ಸಂಸ್ಕೃತಿಯನ್ನು ಪ್ರತಿಯೊಬ್ಬರೂ ಉಳಿಸಿ ಬೆಳೆಸಬೇಕು, ಇದಕ್ಕಾಗಿ ನಿತ್ಯ ಮನೆಗಳಲ್ಲಿ ಶರಣರ ವಚನ, ದಾಸರ ಕೀರ್ತನೆಯನ್ನು ಮಕ್ಕಳಿಗೆ ಕಲಿಸಬೇಕು. ವಚನಗಳಲ್ಲಿನ ಅನುಭಾವ ಉತ್ತಮ ಪ್ರಜೆಗಳನ್ನು ರೂಪಿಸುತ್ತದೆ ಎಂದರು.

ಸುತ್ತೂರು ಸಂಸ್ಥಾನಕ್ಕೆ ನೂರಾರು ವರ್ಷಗಳ ಸುದೀರ್ಘ ಇತಿಹಾಸವಿದ್ದು, ಆದಿ ಶಿವರಾತ್ರೀಶ್ವರ ಶಿವಯೋಗಿಗಳ ಪರಂಪರೆ ಸಮಾಜಕ್ಕೆ ನೀಡಿರುವ ಕೊಡುಗೆ ಅನನ್ಯವಾದ್ದು, ಶ್ರೀ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರು ಅನ್ನ, ಅಕ್ಷರ, ಆಶ್ರಯ ನೀಡಿ ಮಾಡುತ್ತಿರುವ ತ್ರಿವಿಧ ದಾಸೋಹ ಅನುಪಮವಾದ್ದು ಎಂದರು.

ಇದನ್ನೂ ಓದಿ: ಊಟ ಮಾಡಿ ಮಲಗುವ ಮುನ್ನ ಇವುಗಳನ್ನು ತಿನ್ನಿ: ಗೊರಕೆ ತಾಪತ್ರಯವೇ ಇರಲ್ಲ!

ಶಿಕ್ಷಣ, ಆರೋಗ್ಯ, ಸಮಾಜಸೇವೆ,  ಧಾರ್ಮಿಕ, ಆಧ್ಯಾತ್ಮಿಕ ಲೋಕಕ್ಕೆ ವೀರಶೈವ ಲಿಂಗಾಯತ ಮಠಗಳು ನೀಡಿರುವ ಕೊಡುಗೆ ಸ್ಮರಿಸಿದ ಅವರು, ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಮಠಾಧಿಪತಿಗಳ ನೇತೃತ್ವದಲ್ಲಿ ತಾವೂ ಕೂಡ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದು, ತಕ್ಷಣವೇ ಅದಕ್ಕೆ ಮನ್ನಣೆ ನೀಡಿ ಅಧಿಕೃತ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News