ಚಿತ್ರದುರ್ಗ : ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು  ದಾ ರುಣವಾಗಿ ಮೃತಪಟ್ಟಿದ್ದಾರೆ (Road accident). ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ಅವಘಡ ಸಂಭವಿಸಿದೆ.


COMMERCIAL BREAK
SCROLL TO CONTINUE READING

 ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ.   ಬೈಕ್  ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟಿದ್ದಾರೆ (Road accident). ಮೃತರನ್ನು  43 ವರ್ಷದ ನಾಗರಾಜ್,  37 ವರ್ಷದ ಶೈಲಜ,  9 ವರ್ಷದ ವೀರೇಶ್, 7 ವರ್ಷದ ಸಂತೋಷ್ ಎಂದು ಗುರುತಿಸಲಾಗಿದೆ. 
 
 ಇದನ್ನೂ ಓದಿ : Farmers Protest: ಮಾ.29 ಬೃಹತ್ ಪ್ರತಿಭಟನೆಗೆ ಕರೆನೀಡಿದ ರೈತ-ಕಾರ್ಮಿಕ-ದಲಿತ ಸಂಯುಕ್ತ ಹೋರಾಟ


ಮೃತರು ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದ ಬಂಧುಗಳ ಮನೆಯಲ್ಲಿ ಊಟ ಮುಗಿಸಿಕೊಂಡು  ರಾತ್ರಿ ಹನ್ನೊಂದುವರೆ ಸಮಯದಲ್ಲಿ ಸ್ವ ಗ್ರಾಮ ಬಿದುರ್ಗ ಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ (Chitradurga accident today). ಚಿತ್ರದುರ್ಗದ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ.  ಬಸ್ ಒವರ್ ಟೇಕ್ ಮಾಡಿ ಮುನ್ನುಗ್ಗುತ್ತಿದ್ದ ವೇಳೆ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ (Bus accident). ಪರಿಣಾಮ ಬೈಕ್ ನಲ್ಲಿದ್ದ ನಾಲ್ಕು ಜನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.


 


ಇದನ್ನೂ ಓದಿ : ಮದುವೆ ಎಂದರೆ ಪತ್ನಿ ಮೇಲೆ ಅತ್ಯಾಚಾರ ಎಸೆಗಲು ಇರುವ ಅನುಕೂಲತೆಯಲ್ಲ- ಕರ್ನಾಟಕ ಹೈಕೋರ್ಟ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.