ಚಿತ್ರದುರ್ಗ : ಮುರುಘಾ ಮಠದ ನೂತನ ಆಡಳಿತ ಅಧಿಕಾರಿಯಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಬಿ. ವಸ್ತ್ರಮಠದ್ ಅಧಿಕಾರ ಸ್ವೀಕಾರಿಸಿದ್ದಾರೆ. 


COMMERCIAL BREAK
SCROLL TO CONTINUE READING

ಈ ಹಿಂದೆ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರು ಮಠದ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಲೈಂಗಿಕ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಎಸ್ ಕೆ ಬಸವರಾಜನ್ ಅವರನ್ನು ಆಡಳಿತಾಧಿಕಾರಿ ಹುದ್ದೆಯಿಂದ ತೆಗೆದು ಹಾಕಿಲಾಗಿದೆ. ಇವರಿಂದ  ತೆರವಾದ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ವಸ್ತ್ರಮಠದ್ ಆಯ್ಕೆ ಮಾಡಲಾಗಿದೆ. ಮುರುಘಾ ಶ್ರೀಗಳ ಬಂಧನವಾದ ಎರಡು ದಿನಗಳ ನಂತರ ನಿವೃತ್ತ ನ್ಯಾ. ವಸ್ತ್ರಮಠದ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.


ಇದನ್ನೂ ಓದಿ : Murugha Mutt : ಮುರುಘಾ ಶ್ರೀ ಪೊಲೀಸ್ ಕಸ್ಟಡಿಗೆ : ಆತ್ಮಹತ್ಯೆಗೆ ಯತ್ನಿಸಿದ ಶಿಷ್ಯ


[[{"fid":"255787","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಹಿಂದೆ ಮುರುಘಾ ಶರಣರು ಎಸ್.ಬಿ. ವಸ್ತ್ರಮಠದ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಬಂಧನವಾದ ಬಳಿಕ ಅಧಿಕಾರ ವಹಿಸಿಕೊಂಡಿದ್ದಾರೆ. ಇದೀಗ ಮಠದ ಆಡಳಿತ ಮತ್ತು ಸಂಪೂರ್ಣ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಇವರು ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.


ಇದನ್ನೂ ಓದಿ : P Sainath : ಮುರುಘಾ ಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣ : ಬಸವಶ್ರೀ ಪ್ರಶಸ್ತಿ ವಾಪಸ್ ಮಾಡಿದ ಪಿ. ಸಾಯಿನಾಥ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.