ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ ಇಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು, ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿದ್ದರಲ್ಲದೆ ಮಂದಿರ ನಿರ್ಮಾಣ(Ram Mandir)ಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಭರವಸೆ ನೀಡಿದರು.


Scholarship Application: ಹಿಂದುಳಿದ ವರ್ಗದ 'ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ' ನೀಡಿದ ರಾಜ್ಯ ಸರ್ಕಾರ


ನಾವೆಲ್ಲರೂ ಒಂದೇ ಎಂದ ಕೊಲಾಸೋ: ಕ್ರೈಸ್ತ(Christian) ಸಮುದಾಯದ ಎಲ್ಲ ಗಣ್ಯರ ಪರವಾಗಿ ಸಭೆಯಲ್ಲಿ ಮಾತನಾಡಿದ ಉದ್ಯಮಿ ರೊನಾಲ್ಡ್‌ ಕೊಲಾಸೋ ಅವರು, 'ಕ್ರೈಸ್ತ ಸಮುದಾಯ ದೇಣಿಗೆ ನೀಡುತ್ತಿರುವುದು ಇದೇ ಮೊದಲಲ್ಲ. ಹಿಂದಿನಿಂದಲೂ ರಾಜ್ಯ-ದೇಶದ ಪ್ರತಿ ಆಗುಹೋಗುಗಳಿಗೆ ಈ ಸಮುದಾಯ ಸ್ಪಂದಿಸುತ್ತಲೇ ಬಂದಿದೆ. ಶಿಕ್ಷಣ, ಧಾರ್ಮಿಕ, ಆರೋಗ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತ ಸೇವೆಯಲ್ಲಿ ನಿರತವಾಗಿದೆ' ಎಂದರು.


Umesh Katti: ಪಡಿತರ ಚೀಟಿದಾರರಿಗೆ 'ಭರ್ಜರಿ ಗುಡ್ ನ್ಯೂಸ್' ನೀಡಿದ ಸಚಿವ ಉಮೇಶ್ ಕತ್ತಿ..!


'ವೈಯಕ್ತಿಕವಾಗಿ ನನ್ನ ಮಟ್ಟಿಗೆ ಹೇಳುವುದಾದರೆ 36 ದೇವಾಲಯಗಳಿಗೆ ಆರ್ಥಿಕ ನೆರವು ನೀಡಿದ್ದೇನೆ. ಶಾಲೆ, ಆಸ್ಪತ್ರೆ ನಿರ್ಮಾಣಕ್ಕೆ ಕೈಜೋಡಿಸಿದ್ದೇನೆ. ದೇಗುಲ ಮಾತ್ರವಲ್ಲದೆ ಚರ್ಚು, ಮಸೀದಿ ನಿರ್ಮಾಣಕ್ಕೂ ಕೈಲಾದ ನೆರವು ನೀಡಿದ್ದೇನೆ. ಇದೆಲ್ಲವನ್ನು ಮಾಡಿದ್ದು ಪರಸ್ಪರ ಸೌಹಾರ್ದತೆಗಾಗಿ ಮತ್ತೂ ನಾವೆಲ್ಲೂ ಒಂದು ಎಂಬ ಕಾರಣಕ್ಕಾಗಿ. ರಾಜ್ಯದಲ್ಲಿ ಕ್ರೈಸ್ತ ಅಭಿವೃದಿ ನಿಗಮ ಸ್ಥಾಪನೆಯಾಗಿದ್ದು, ಅದಕ್ಕೆ 200 ಕೋಟಿ ರೂ. ಅನುದಾನ ನೀಡಲಾಗಿದೆ. ಇದು ನಿಜಕ್ಕೂ ಸಂತಸದ ವಿಷಯ' ಎಂದು ಕೊಲಾಸೋ ಹೇಳಿದರು.


ಇನ್ನೊಂದು ವರ್ಷದಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.