ಬೆಂಗಳೂರು: ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಲ್ಲಿ ಯಾರ ಹೇಳಿಕೆಯೂ ಮುಖ್ಯವಲ್ಲ, ಸತ್ಯ ಹೊರಬರಬೇಕು ಅಷ್ಟೇ. ಯಾರು ವಾಗ್ದಾಳಿ ಮಾಡ್ತಾರೋ, ಯಾರು ಹೇಳಿಕೆ ಕೊಡ್ತಾರೋ ಅದು ಮುಖ್ಯವಾಗುವುದಿಲ್ಲ. ಘಟನೆಯ ಸತ್ಯಾಂಶ ಜನರಿಗೆ ಗೊತ್ತಾಗಬೇಕಿದೆ. ಈ ಹಿನ್ನೆಲೆ ನಿನ್ನೆ ನಾನು ಕಮಿಷನರ್ ಮತ್ತು ಡಿಜಿಯವರ ಬಳಿ ಮಾತನಾಡಿದ್ದೇನೆ. ಈ ಪ್ರಕರಣವನ್ನು ಸಿಐಡಿಗೆ ಕೊಡಬೇಕೆಂದು ತೀರ್ಮಾನ ಮಾಡಿದ್ದೇವೆ’ ಎಂದರು.
ಇದನ್ನೂ ಓದಿ: ಹಿಂದಿ ಹೇರಿಕೆಗೆ ಮುನ್ನುಡಿ ಬರೆದಿದ್ದೇ ಕಾಂಗ್ರೆಸ್: ಜೆಡಿಎಸ್
ಚಂದ್ರು ಹತ್ಯೆ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತೆನಿಖೆಯಾಗಿ ಸತ್ಯ ಹೊರಗಡೆ ಬರಬೇಕು. 3ನೇ ಪಾರ್ಟಿಯಿಂದಲೇ ತೆನಿಖೆಯಾಗಲಿ, ಒಟ್ನಲ್ಲಿ ಸತ್ಯ ಹೊರಗಡೆ ಬಂದರೆ ಸಾಕು. ಹೀಗಾಗಿ ಸಿಐಡಿ ತೆನಿಖೆಗೆ ಕೊಡಬೇಕೆಂದು ಹೇಳಿದ್ದೇನೆ. ಇಂದು ಬಹುತೇಕ ಕಮಿಷನರ್ ಅವರು ಡಿಜೆಗೆ ಪತ್ರ ಬರೆದು ಸಿಐಡಿಗೆ ಕೊಡ್ತಾರೆ ಎಂದು ಹೇಳಿದ್ದಾರೆ.
3 ತಂಡದಲ್ಲಿ ರಾಜ್ಯ ಪ್ರವಾಸ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣಾ ಪೂರ್ವತಯಾರಿಗೆ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ರಾಜ್ಯ ಪ್ರವಾಸ ವಿಚಾರವಾಗಿ ಮಾತನಾಡಿರುವ ಸಿಎಂ ಬೊಮ್ಮಾಯಿ, 3 ತಂಡದಲ್ಲಿ ರಾಜ್ಯ ಪ್ರವಾಸ ಮಾಡ್ತೀವಿ ಎಂದು ಹೇಳಿದ್ದಾರೆ. ಬೂತ್ ಮತ್ತು ಜಿಲ್ಲಾ ಮಂಡಲ ಮಟ್ಟದಲ್ಲಿ ಪ್ರವಾಸ ನಡೆಯಲಿದ್ದು, ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಮಾಡ್ತೀವಿ. ಎಲ್ಲರೂ ಎರಡೆರಡು ದಿನ ಮೂರು ವಿಭಾಗದಲ್ಲಿ 3 ತಂಡದಿಂದ ಪ್ರವಾಸ ನಡೆಯಲಿದೆ. ಈ ಪ್ರವಾಸದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಎಲ್ಲಾ ನಾಯಕರು ಇರ್ತಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಅತೀಹೆಚ್ಚು ಸುಳ್ಳು ಹೇಳಿದ ಬಿಜೆಪಿ ಹಾಲಿ ಶಾಸಕರಿಗೆಲ್ಲರಿಗೂ ಟಿಕೆಟ್ ಖಚಿತ: ಸಿದ್ದರಾಮಯ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.