)
ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ಮೆರವಣಿಗೆ ನಡೆಯುವ ಸಂಧರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ವಿಚಾರಣೆ ನಡೆಸಿ ನಂತರ ಇಪ್ಪತ್ತೊಂದು ಜನರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ, ಗಲಭೆ ನಡೆದ ಕೆಲವೇ ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.
ಘಟನೆ ನಡೆದ ತಕ್ಷಣ ಇಷ್ಟು ಬೇಗ ಕ್ರಮ ತೆಗೆದು ಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ ಎಂದು ಚೆಲುವರಾಯ ಸ್ವಾಮಿ ಹೇಳಿದ್ದಾರೆ.
ಬಿಜೆಪಿಯ ಹಾಗೂ ಕೆಲವು ಜೆಡಿಎಸ್ ನಾಯಕರು ಪ್ರಚೋದಿಸುವ ಕೆಲಸ ಮಾಡ್ತಾ ಇದ್ದಾರೆ. ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು, ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿಯ ಘಟನೆ ನಡೆದಿಲ್ಲ. ಹೊರಗಡೆಯಿಂದ ಬಂದು ಯಾರೋ ಗಲಭೆ ಮಾಡಿರಬಹುದು ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಬಿಜೆಪಿ, ಜೆಡಿಎಸ್ ನವರು ರಾಜಕಾರಣವಾಗಿ ನಮ್ಮನ್ನು ಎದುರಿಸಲು ಸಾಧ್ಯವಾಗದೆ ಪ್ರಚೋದನೆ ನೀಡುತ್ತಾ ಇದ್ದಾರೆ. ನಾವು ಯಾರ ಓಲೈಕೆಯನ್ನೂ ಮಾಡುತ್ತಿಲ್ಲ. ಒಂದು ವೇಳೆ ಓಲೈಕೆ ಮಾಡುತ್ತಿದ್ದೇವಾ ಎಂದು ಪ್ರಶ್ನಿಸಿದ್ದಾರೆ. ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಹಿಸಲು ಆಗ್ತಿಲ್ಲ. ಸದನದಲ್ಲಿ ನಮ್ಮನ್ನು ಎದುರಿಸಲು ಅವರಿಗೆ ಆಗೋದಿಲ್ಲ. ಹೀಗಾಗಿ ಇವಾಗ ಇಂತಹಾ ಘಟನೆಗಳು ಆದಾಗ ಪ್ರಚೋದನೆ ಕೊಡುವ ಕೆಲಸ ಮಾಡ್ತಾ ಇದ್ದಾರೆ ಎಂದು ಸಚಿವರು ಕಿಡಿ ಕಾರಿದ್ದಾರೆ.