ರಾಜ್ಯದಲ್ಲಿ ಶೀಘ್ರವೇ 1 -8 ನೇ ತರಗತಿ ಆರಂಭ : ಶಿಕ್ಷಣ ಸಚಿವ ಸುರೇಶ್ ಕುಮಾರ್
ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೆ ತರಗತಿ ಆರಂಭಿಸುವ ಕುರಿತು ಫೆಬ್ರವರಿ ಎರಡನೇ ವಾರ ಇಲ್ಲವೇ ಮೂರನೇ ವಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ 9, 10 ಹಾಗೂ ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದ್ದು ಶೀಘ್ರದಲ್ಲೇ ಒಂದರಿಂದ ಎಂಟನೇ ತರಗತಿಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ (S Suresh Kumar) ಮಾಹಿತಿ ನೀಡಿದ್ದಾರೆ.
ನಿನ್ನೆ ಗೌರಿಬಿದನೂರು ತಾಲ್ಲೂಕಿನ ನಗರಗೆರೆ ಹೋಬಳಿ ನಂಜಯ್ಯಗಾರಿಹಳ್ಳಿಯ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ (S Suresh Kumar), ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೆ ತರಗತಿ ಆರಂಭಿಸುವ ಕುರಿತು ಫೆಬ್ರವರಿ ಎರಡನೇ ವಾರ ಇಲ್ಲವೇ ಮೂರನೇ ವಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ - ಬಲವಂತವಾಗಿ ಸ್ಕೂಲ್ ಫೀ ಸಂಬಂಧಿಸಿದಂತೆ #KAMS ನಡೆಗೆ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ
ಆರೋಗ್ಯ ಇಲಾಖೆ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದು ಮುಂದಿನ ನಿರ್ಧಾರ:
ಪ್ರಾಥಮಿಕ ಶಾಲಾ ಮಕ್ಕಳನ್ನು ಶಾಲೆಗೆ ಆಹ್ವಾನಿಸುವ ಮೊದಲು ಆರೋಗ್ಯ ಇಲಾಖೆ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸಭೆ ನಡೆಸಿ ದೀರ್ಘವಾಗಿ ಚರ್ಚೆ ನಡೆಸಿದ ಬಳಿಕವೇ ಒಂದರಿಂದ ಎಂಟನೇ ತರಗತಿಗಳನ್ನು (Schools Reopen) ಪ್ರಾರಂಭಿಸುವ ಕುರಿತು ನಿರ್ಧಾರಕ್ಕೆ ಬರಲಾಗುವುದು ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದರು.
ಇದನ್ನೂ ಓದಿ - ದುಬಾರಿ ಶುಲ್ಕ ಪಾವತಿ ಬಗ್ಗೆ ಫೇಸ್‌ಬುಕ್‌ನಲ್ಲಿ ಅಳಲು ತೋಡಿಕೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ 9, 10 ಹಾಗೂ ಪಿಯುಸಿ (PUC) ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶೇಕಡ 80 ರಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಇದಲ್ಲದೆ 6ರಿಂದ ಎಂಟನೇ ತರಗತಿ ಮಕ್ಕಳಿಗೆ ವಿದ್ಯಾಗಮ ಕಲಿಕೆ ಮುಂದುವರೆದಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.