School Reopen: ಫೆ.22ರಿಂದ 6 ರಿಂದ 8ನೇ ತರಗತಿ ಶಾಲಾರಂಭ: ಸರ್ಕಾರದಿಂದ ಅಧಿಕೃತ ಆದೇಶ!
ಈ ಬಗ್ಗೆ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯದಲ್ಲಿ 6ರಿಂದ 8ನೇ ತರಗತಿಗಳು ಫೆ. 22, ಸೋಮವಾರ ಆರಂಭವಾಗಲಿವೆ. ಆದರೆ ಬೆಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಸಹಿತ ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳ ಶಾಲೆಗಳಲ್ಲಿ ಅಂದಿನಿಂದ 8ನೇ ತರಗತಿಗೆ ಮಾತ್ರ ಶಾಲೆ, ಅದಕ್ಕಿಂತ ಕಿರಿಯರಿಗೆ ಎಂದಿನಂತೆ ವಿದ್ಯಾಗಮ ಮುಂದುವರಿಯಲಿದೆ. ಈ ಬಗ್ಗೆ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಕಳೆದ ಮಂಗಳವಾರ (ಫೆ.16) ಶಿಕ್ಷಣ ಸಚಿವ ಸುರೇಶ್ ಕುಮಾರ್(S Suresh Kumar) ನೇತೃತ್ವದಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು.
KS Eshwarappa: ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಈಶ್ವರಪ್ಪ..!
6ರಿಂದ ದ್ವಿತೀಯ ಪಿಯುವರೆಗೆ ದಿನ ಪೂರ್ತಿ ತರಗತಿ ನಡೆಯಲಿದೆ. ಆರೋಗ್ಯ ಇಲಾಖೆ ಶಾಲೆಗೆ ಹಾಜರಾಗುತ್ತಿರುವ ಮಕ್ಕಳ ರ್ಯಾಡಮ್ ಕೋವಿಡ್(Covid) ಪರೀಕ್ಷೆ ನಡೆಸಲಿದೆ.
Uddhav Thackeray: ಮತ್ತೆ ಕನ್ನಡಿಗರ ಸ್ವಾಭಿಮಾನ ಕೆಣಕಿದ ಮಹಾ ಸಿಎಂ ಉದ್ಧವ್ ಠಾಕ್ರೆ..!
ಕೇರಳದಿಂದ ಗಡಿಯ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ನೆಗೆಟಿವ್ ಫಲಿತಾಂಶವಿದ್ದರೆ ಮಾತ್ರ ಶಾಲೆ(School)ಗೆ ಹಾಜರಾಗಬೇಕು. 6ರಿಂದ 8ನೇ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪಾಲಕ ಅಥವಾ ಪೋಷಕರಿಂದ ಒಪ್ಪಿಗೆ ಪತ್ರ ತರುವುದು ಕಡ್ಡಾಯ. ತರಗತಿಗೆ ಹಾಜರಾಗಬೇಕು ಎಂಬ ಕಡ್ಡಾಯ ನಿಯಮವಿಲ್ಲ ಎಂದು ಸೂಚಿಸಲಾಗಿದೆ.
Basanagouda Patil Yatnal: ಬಿ.ವೈ.ವಿಜಯೇಂದ್ರ ರಾಜ್ಯದ ಸೂಪರ್ ಸಿಎಂ, ಸಾಕ್ಷಿ ನೀಡಿದ ಯತ್ನಾಳ್!
ಆರರಿಂದ ಎಂಟನೇ ತರಗತಿಯರೆಗೆ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ನಡೆಸುವುದರಿಂದ ವಿದ್ಯಾರ್ಥಿಗಳು(Student) ಮಧ್ಯಾಹ್ನದ ಊಟವನ್ನು ಮನೆಯಿಂದಲೇ ತರುವಂತೆ ಸೂಚಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
RainFall: ಗುಡುಗು-ಮಿಂಚಿನಿಂದ ಕೂಡಿದ ವಾತಾವರಣ: ಉ-ಕ ಹಲವು ಭಾಗದಲ್ಲಿ ಮಳೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.