ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಲೋಕಾಯುಕ್ತರು ಬೆಳ್ಳಂದೂರು, ವೈಟ್ ಫೀಲ್ಡ್ ನಲ್ಲಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ, ಇದೀಗ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಪ್ರಕರಣ ರದ್ದುಕೋರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಸಿಎಂ ಯಡಿಯೂರಪ್ಪಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.


COMMERCIAL BREAK
SCROLL TO CONTINUE READING

2007-08ರಲ್ಲಿ ಯಡಿಯೂರಪ್ಪ(B.S.Yeddyurappa) ಅವರು ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ಬೆಳ್ಳಂದೂರು, ವೈಟ್ ಫೀಲ್ಡ್ ನಲ್ಲಿ 14 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂಬುದಾಗಿ ಅವರ ವಿರುದ್ಧ, ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಇಂತಹ ಪ್ರಕರಣ ರದ್ದು ಕೋರಿ, ಯಡಿಯೂರಪ್ಪ ಅವರ ಹೈಕೋರ್ಟ್ ಮೆಟ್ಟಿಲೇರಿದ್ದರು.


ರಾಜ್ಯದ ಗಮನ ಸೆಳೆದ ಗ್ರಾಮ ಪಂಚಾಯತಿ ಚುನಾವಣಾ ಪ್ರಣಾಳಿಕೆ


ಇಂದು ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ ನ್ಯಾಯಾಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ನ್ಯಾಯಪೀಠವು, ಪ್ರಕರಣ ಸಂಬಂಧ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವಂತ ಪೂರಕ ದಾಖಲೆಗಳು ಸರಿಯಿಲ್ಲ ಎಂಬುದಾಗಿ ತಿಳಿಸಿ, ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಈಗ ಎದುರಾಗಿದೆ.


ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ