ಬೆಂಗಳೂರು: ಶಿವಮೊಗ್ಗದಲ್ಲಿ ಜನವರಿ 2 ಹಾಗೂ 3ರಂದು ಎರಡು ದಿನಗಳ ಕಾಲ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಇದರಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಈ ಹಿನ್ನೆಲೆಯಲ್ಲಿ ಜನವರಿ 1ರಂದೇ ಅರುಣ್ ಸಿಂಗ್(Arun Singh) ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ಕುಮಾರಕೃಪ ಅತಿಥಿಗೃಹದಲ್ಲಿ ವಾಸ್ತವ್ಯಹೂಡಿದ್ದರು. ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಮಹತ್ವದ ಮಾತುಕತೆ ನಡೆಸಿದ್ದಾರೆ.


ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಪೂರಕ ಕ್ರಮ: ಮುಖ್ಯಮಂತ್ರಿ BS Yediyurappa


ಕುಮಾರಕೃಪ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಸಿಎಂ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಮತ್ತಿತರ ಪ್ರಮುಖ ನಾಯಕರು ಚರ್ಚೆ ನಡೆಸಿದರು.


BJP: 'ಡಿಕೆಶಿ-ಸಿದ್ಧರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ'


ಕೆಲವೇ ಆಪ್ತ ನಾಯಕರಿಗೆ ಮಾತ್ರ ಅರುಣ್ ಸಿಂಗ್ ಅವರ ಭೇಟಿಗೆ ಅವಕಾಶ ಕಲ್ಪಿಸಲಾಗಿತ್ತು. ಕೆಲವು ನಾಯಕರು ಅವರನ್ನು ಭೇಟಿಯಾಗುವ ಇಚ್ಛೆ ಹೊಂದಿದ್ದರಾದರೂ ಅವಕಾಶ ಸಿಗಲಿಲ್ಲ. ಸುಮಾರು 20 ನಿಮಿಷಗಳಿಗೂ ಹೆಚ್ಚು ಕಾಲ ಅರುಣ್ ಸಿಂಗ್ ಜೊತೆ ಬಿಎಸ್‍ವೈ, ಗೋವಿಂದ ಕಾರಜೋಳ ಅವರುಗಳು, ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ, ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿ, ಪಕ್ಷದೊಳಗಿನ ಭಿನ್ನಮತ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


B.S.Yediyurappa: ಬಿಜೆಪಿ ಕೋರ್ ಕಮಿಟಿ ಸಭೆ ಹಿನ್ನೆಲೆ ಸಿಎಂಗೆ ಶುರುವಾಗಿದೆ ತಲೆನೋವು!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ


Android Link - https://bit.ly/3hDyh4G


iOS Link - https://apple.co/3loQYe


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.