ಬೆಂಗಳೂರು: ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, 'ಒಟ್ಟು 5,728 ಗ್ರಾಮ ಪಂಚಾಯಿತಿಗಳ ಪೈಕಿ 3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ(BJP) ಬೆಂಬಲಿತರಿಗೆ ಬಹುಮತ ಲಭಿಸಿದೆ' ಎಂದರು. ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಫಲವಾಗಿ ಬಿಜೆಪಿಗೆ ಈ ಜಯ ದೊರಕಿದೆ. ವಿಧಾನಸಭಾ ಕ್ಷೇತ್ರಗಳು ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವು ದೊರಕಿದೆ. ಹಿಂದೆ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು ಸಿಕ್ಕಿದೆ ಎಂದರು.
School-College Open: ನಾಳೆಯಿಂದ ಶಾಲಾ-ಕಾಲೇಜು ಆರಂಭ: ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ!
ವಿವಿಧ ಕ್ಷೇತ್ರಗಳ ಕಾರ್ಯಕರ್ತರು ಮತ್ತು ಶಾಸಕರ ಪರಿಶ್ರಮದಿಂದ ಬಿಜೆಪಿ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಹಾಗೆಯೇ ಇದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಕೃಷಿಪರ ನೀತಿಗಳಿಗೆ ರೈತರ ಬೆಂಬಲ ಇರುವುದಕ್ಕೆ ಸಾಕ್ಷಿಯಾಗಿದ ಎಂದೂ ಅಭಿಪ್ರಾಯಪಟ್ಟರು.
ವಿವಾದಾಸ್ಪದ ಪೊಲೀಸ್ ಅಧಿಕಾರಿ ಡಿ. ರೂಪ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಕೇಳಿರುವುದೇನು?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.