ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಚುರುಕುಗೊಂಡಿರುವ ಬೆನ್ನಲ್ಲೇ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೀಶ್ವರ್ ಅದೃಷ್ಠವೇ ಖುಲಾಯಿಸಿದೆ. ಸ್ವತಹ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(B.S. Yediyurappa) ಅವರೇ, ಯೋಗೀಶ್ವರ್ ಅವರನ್ನು ಸಚಿವರನ್ನಾಗಿ ಮಾಡಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಬಿಎಸ್ ವೈ ಸಂಪುಟಕ್ಕೆ ಸೈನಿಕನ ಎಂಟ್ರಿ ಸದ್ಯದಲ್ಲೇ ಆಗಲಿದೆ ಎಂಬ ಸುಳಿವು ಬಿಟ್ಟುಕೊಟ್ಟಿದ್ದಾರೆ.
ರೈತರಿಗೆ ದೆಹಲಿ ಪ್ರವೇಶ ನಿರ್ಬಂಧ: ಡಿ. 7 ರಂದು ಸಾವಿರಾರು ರೈತರಿಂದ ವಿಧಾನಸೌಧ ಮುತ್ತಿಗೆ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೀಶ್ವರ್ ನೂರಕ್ಕೆ ನೂರರಷ್ಟು ಮಂತ್ರಿ ಆಗ್ತಾರೆ. ಯೋಗೀಶ್ವರ್ ಅವರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಸಿಪಿ ಯೋಗೀಶ್ವರ್ ಬಿಎಸ್ ವೈ ಸಂಪುಟ ಸೇರುವುದು ಖಚಿತವಾದಂತೆ ಆಗಿದೆ.