ಬೆಂಗಳೂರು: ರಾಯಚೂರು ಜಿಲ್ಲೆಯ ಮಸ್ಕಿ ನಾಲಾ ನೀರಾವರಿ ಯೋಜನೆಗೆ ಮತ್ತು ಮರಾಠಾ ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಈ ಕುರಿತು ಶುಕ್ರವಾರ ಆದೇಶಗಳನ್ನು ರವಾನಿಸಲಾಗಿದೆ. ಎಡದಂಡೆ ಹಾಗೂ ಬಲದಂಡೆ ನಾಲೆಗಳು ಮತ್ತು ಅವುಗಳಪುನರ್ರಚನೆಗಾಗಿ 2018 -19 ರಲ್ಲಿ ನಿಗದಿಪಡಿಸಿದಂತೆ ಅಂದಾಜು 52.54 ಕೋಟಿ ರೂ.ಗಳ ವೆಚ್ಚದೊಂದಿಗೆ ವಿವರವಾದ ಯೋಜನಾ ವರದಿಗೆ (DPR) ಆಡಳಿತಾತ್ಮಕ ಅನುಮತಿ ನೀಡಿದೆ ಎಂದು ಸರ್ಕಾರ ಹೇಳಿದೆ.
ಮಹಿಳೆಯರಿಗೆ 'ಗುಡ್ ನ್ಯೂಸ್': ₹ 3 ಲಕ್ಷ ಸಾಲ ಸೌಲಭ್ಯ- ಇಂದೇ ಅರ್ಜಿ ಹಾಕಿ
ನೀರಾವರಿ ಇಲಾಖೆಯ ಮೂಲಗಳ ಪ್ರಕಾರ, ಈ ಯೋಜನೆಯುಹೈದರಾಬಾದ್ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಇದು ಅಂತಿಮವಾಗಿ ಸರ್ಕಾರದ ಅನುಮೋದನೆ ಪಡೆದಿದೆ.
ಇದಲ್ಲದೆ 50 ಕೋಟಿ ರೂ.ಗಳ ಅನುದಾನದೊಂದಿಗೆ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೂ ಸಹ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶದಂತೆ "ರಾಜ್ಯದಲ್ಲಿ ಗಣನೀಯ ಪ್ರಮಾಣದ ಮರಾಠಿ ಭಾಷಿಗರು ಇರುವ ಕಾರಣ ದ, ಅವರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಅಭಿವೃದ್ಧಿಗಾಗಿ ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಲಾಗುವುದು ಮತ್ತು ಈ ಉದ್ದೇಶಕ್ಕಾಗಿಹಣಕಾಸು ಇಲಾಖೆಯ ಒಪ್ಪಿಗೆಯೊಂದಿಗೆ 50 ಕೋಟಿ ರೂ. ಮೀಸಲಾಗಿಡಲಾಗಿದೆ.
ರಾಜ್ಯದಲ್ಲಿ ಮತ್ತೆ 3 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ...!
ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಶೀಘ್ರವೇ ಉಪಚುನಾವಣೆಗಳು ನಡೆಯುವ ದೃಷ್ಟಿಯಿಂದ ಈ ಎರಡೂ ನಿರ್ಧಾರಕ್ಕೆ ಬರಲಾಗಿದೆ ಎಂದು ಆಡಳಿತ ವಲಯದ ಮೂಲಗಳು ತಿಳಿಸಿವೆ.
ಹಾಲಿ ಕಾಂಗ್ರೆಸ್ ಶಾಸಕ ಪ್ರತಾಪ್ ಗೌಡ ಪಾಟೀಲ್ 2019 ರಲ್ಲಿ ವಿಧಾನಸಭೆಗೆ ರಾಜೀನಾಮೆ ನೀಡಿದ ನಂತರ ಮಸ್ಕಿ ವಿಧಾನಸಭಾ ಕ್ಷೇತ್ರ ಖಾಲಿ ಬಿದ್ದಿತು ಮತ್ತು ಇತರ 15 ಶಾಸಕರು ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟನ್ನು ಹುಟ್ಟುಹಾಕಿದ್ದರು.
ಸಚಿವ ಸ್ಥಾನನಕ್ಕಾಗಿ ಪಟ್ಟು- ರೆಬಲ್ ಆದ ಜಾರಕಿಹೊಳಿ ಅಂಡ್ ಟೀಮ್!
ಸೆಪ್ಟೆಂಬರ್ 24 ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊರೋನಾ ಪರೀಕ್ಷೆಗೊಳಪಟ್ಟ ಹಾಲಿ ಕಾಂಗ್ರೆಸ್ ಶಾಸಕ ಬಿ ನಾರಾಯಣ್ ರಾವ್ ಅವರ ನಿಧನದ ತರುವಾಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಅಗತ್ಯವಾಗಿತ್ತು. ಉತ್ತರ ಕರ್ನಾಟಕದ ಬೀದರ್ ಜಿಲ್ಲೆಯ ಬಸವಕಲ್ಯಾಣ ಮಹಾರಾಷ್ಟ್ರದ ಗಡಿಯಲ್ಲಿದೆ. ಇದು ಗಣನೀಯಸಂಖ್ಯೆಯಲ್ಲಿ ಮರಾಠಾ ಭಾಷಿಗರನ್ನು ಹೊಂದಿದೆ.
ಬಿಹಾರ ಸಿಎಂ ಆಯ್ಕೆಗೆ ಇಂದು NDA ಸಭೆ: ನಿರ್ಧಾರವಾಗುತ್ತಾ ನಿತೀಶ್ ಕುಮಾರ್ ಭವಿಷ್ಯ