ಬೆಳಗಾವಿ : ಜನಸಂಕಲ್ಪ ಯಾತ್ರೆಯ ಸಂದರ್ಭದಲ್ಲಿಯೇ ನವದೆಹಲಿಗೆ ಭೇಟಿ ನೀಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ : “ಬಿಜೆಪಿ ನಾಯಕರು ಇತರೆ ಭಾಷೆಗಳನ್ನು ಹತ್ತಿಕ್ಕಲು ಹೊರಟಿದ್ದಾರೆ”
ಇಂದು ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬೆಳಗಾವಿಗೆ ಶುಭ ಸುದ್ದಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಣಯ ಕೈಗೊಂಡಾಗ ಎಲ್ಲರಿಗೂ ತಿಳಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು :
ಕೊಲ್ಲಾಪುರದ ಕನೇರಿ ಮಠದಲ್ಲಿ ಕನ್ನಡ ಭವನ ಕಟ್ಟಲು ಶಿವಸೇನೆಯವರು ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ಈಗಾಗಲೇ ಮಹಾರಾಷ್ಟ್ರದಲ್ಲಿ ಹತ್ತು ಹಲವಾರು ಸಂಘಗಳ ಕನ್ನಡ ಭವನಗಳು ಇವೆ.ಹಲವಾರು ದೇವಸ್ಥಾನಗಳು, ಯಾತ್ರಿನಿವಾಸಗಳೂ ಇವೆ. ಈ ವಿಚಾರದಲ್ಲಿ ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು ಎಂಬುದು ನನ್ನ ಅನಿಸಿಕೆ ಎಂದರು.
ಇದನ್ನೂ ಓದಿ : PM Kisan Update: ಸ್ಥಗಿತಗೊಳ್ಳಲಿದೆಯಾ ಪಿಎಂ ಕಿಸಾನ್ ಯೋಜನೆ? ಸರ್ಕಾರ ಹೇಳಿದ್ದೇನು?
ಪ್ರಭಾಕರ ಕೋರೆಯವರು ಸ್ನೇಹಜೀವಿ :
ಕೆಎಲ್ ಇ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪ್ರಭಾಕರ ಕೋರೆಯವರ 75 ನೇ ವರ್ಷದ ಅಮೃತ ಮಹೋತ್ಸವ ಆಚರಿಸುತ್ತಿರುವುದು ಸಂತೋಷದ ವಿಷಯ. ಇಡೀ ಉತ್ತರ ಕರ್ನಾಟಕಕ್ಕೆ ಅವರ ಸುದೀರ್ಘ ನಾಲ್ಕು ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಶೈಕ್ಷಣಿಕ, ಆರೋಗ್ಯ, ಕೃಷಿ, ಸಹಕಾರಿ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಜನಪ್ರಿಯರಾಗಿದ್ದಾರೆ. ಜನಾನುರಾಗಿಯಾದ ಕೋರೆಯವರಲ್ಲಿ ನಿರಂತರವಾಗಿ ಕೆಲಸ ಮಾಡುವ ಶಕ್ತಿ ಇದೆ. ಎಲ್ಲರೊಂದಿಗೂ ಸ್ನೇಹದಿಂದಿರುವ ಸ್ನೇಹಜೀವಿ. ಈ ಸಮಾರಂಭ ಅರ್ಥಪೂರ್ಣವಾಗಿರಲಿದೆ ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ