Basavaraj Bommai : ಮೇಕೆದಾಟು ಪಾದಯಾತ್ರೆ ಕೈಬಿಡುವಂತೆ ಕಾಂಗ್ರೆಸ್ ನಾಯಕರಿಗೆ ಸಿಎಂ ಮನವಿ!

ಮೇಕೆದಾಟು ಪಾದಯಾತ್ರೆಯನ್ನ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮನವಿ ಪತ್ರ ಬರೆದಿದ್ದಾರೆ.

Written by - Channabasava A Kashinakunti | Last Updated : Jan 13, 2022, 12:55 PM IST
  • ನಾಲ್ಕನೇ ದಿನದ ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆ
  • ಪಾದಯಾತ್ರೆಯನ್ನ ಕೈಬಿಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಪತ್ರ
  • ಮುಂಬರುವ ದಿನಗಳಲ್ಲಿ ಒಂದಾಗಿ ಮೇಕೆದಾಟು ಯೋಜನೆ ಅನುಷ್ಠಾನದ ಕುರಿತು ಕ್ರಮ ಕೈಗೊಳ್ಳೋಣ
Basavaraj Bommai : ಮೇಕೆದಾಟು ಪಾದಯಾತ್ರೆ ಕೈಬಿಡುವಂತೆ ಕಾಂಗ್ರೆಸ್ ನಾಯಕರಿಗೆ ಸಿಎಂ ಮನವಿ! title=

ಬೆಂಗಳೂರು : ನಾಲ್ಕನೇ ದಿನದ ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆಯನ್ನ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮನವಿ ಪತ್ರ ಬರೆದಿದ್ದಾರೆ.

ಮನವಿ ಪತ್ರದಲ್ಲಿ ಸಿಎಂ ಬೊಮ್ಮಾಯಿ(Basavaraj Bommai), ನಾನು ಮೇಕೆದಾಟು ಯೋಜನೆ(Mekedatu Project) ಬಗ್ಗೆ ನಿಮ್ಮೆಲ್ಲರ ವಿಶ್ವಾಸದೊಂದಿಗೆ ಅನುಷ್ಠಾನಕ್ಕಾಗಿ ಬೇಕಾಗಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧನಿದ್ದೇನೆ. ಕೊರೋನಾ ಮಹಾಮಾರಿಯ 3ನೇ ಅಲೆ ತೀವ್ರವಾಗಿ ಅಪ್ಪಳಿಸಿದ ಹಿನ್ನೆಲೆಯಲ್ಲಿ ಜನಜೀವನ ವಿಶೇಷವಾಗಿ ಮಕ್ಕಳ ಮೇಲೆ ದುಷ್ಪರಿಣಾಮ ಬೀರಿದೆ. ಈ ಸಂದರ್ಭದಲ್ಲಿ ಹೆಚ್ಚು ಜನರನ್ನು ಸೇರಿಸಿ ಪಾದಯಾತ್ರೆ ಮುಂತಾದವುಗಳನ್ನು ಮಾಡುವುದು ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಸರಿಯಿರುವುದಿಲ್ಲ. ಈಗಾಗಲೇ ಮಾನ್ಯ ಉಚ್ಛನ್ಯಾಯಾಲಯ ಕೂಡ ಇದರ ಬಗ್ಗೆ ತೀವ್ರವಾದಂತಹ ಅಭಿಪ್ರಾಯ ನೀಡಿದೆ ಮತ್ತು ಇದು ಜನಾಭಿಪ್ರಾಯ ಕೂಡ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ : ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದ ಮಲ್ಲಿಕಾರ್ಜುನ ಖರ್ಗೆ ಕೊರೊನಾ ದೃಢ, ಹೆಚ್ಚಿದ ಆತಂಕ

ಹೀಗಾಗಿ ಪಾದಯಾತ್ರೆ(Mekedatu Hike)ಯನ್ನು ಮುಂದುವರೆಸುವುದನ್ನು ಕೈಬಿಟ್ಟು ನಾವೆಲ್ಲ ಈಗ ಕೊರೋನಾವನ್ನು  ಎದುರಿಸಿ ಮುಂಬರುವ ದಿನಗಳಲ್ಲಿ ಒಂದಾಗಿ ಮೇಕೆದಾಟು ಯೋಜನೆ ಅನುಷ್ಠಾನದ ಕುರಿತು ಕ್ರಮ ಕೈಗೊಳ್ಳೋಣ ಎಂಬ ಮನವಿಯನ್ನು ತಮ್ಮಲ್ಲಿ ಮಾಡುತ್ತೇನೆ ಎಂದು ಪತ್ರದಲ್ಲಿ ಸಿಎಂ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News