ನವದೆಹಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ  ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.


COMMERCIAL BREAK
SCROLL TO CONTINUE READING

ಕರ್ನಾಟಕದ ಕಲಬುರಗಿ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಮಿತ್ರಾ ಯೋಜನೆಯಡಿ ಸಹಾಯಾನುದಾನ ಪಡೆದು ವಿಶ್ವಮಟ್ಟದ ಮೆಗಾ ಜವಳಿ ಪಾರ್ಕ್ ಸ್ಥಾಪನೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ.ಈ ಮೂರು ಜಿಲ್ಲೆಗಳು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಮೀಪದಲ್ಲಿದ್ದು, ಎಲ್ಲಾ ಪ್ರಮುಖ ನಗರಗಳಿಗೆ  ಹಾಗೂ ಬಂದರುಗಳಿಗೆ ಕೂಡ ಸಂಪರ್ಕವಿದೆ.ಈ ಜಿಲ್ಲೆಗಳಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪನೆಯಿಂದಾಗಿ ಜವಳಿ ಕೇಂದ್ರವಾಗಿ ಜಿಲ್ಲೆಗಳನ್ನು ಪರಿವರ್ತಿಸಲು ಸಾಧ್ಯವಾಗಲಿದೆ.ಪ್ರಧಾನಮಂತ್ರಿಗಳ ಕನಸಿನಂತೆ ಜವಳಿ ಕೇತ್ರದಲ್ಲಿ ದೇಶ ಆತ್ಮನಿರ್ಭರ್ ಆಗಲು ಕೂಡ ಸಹಕಾರಿಯಾಗಲಿದೆ.


ಇದಲ್ಲದೆ ವಿಜಯಪುರ, ತುಮಕೂರು ಹಾಗೂ ಕಲಬುರಗಿ ಜಿಲ್ಲೆಗಳು ಶೈಕ್ಷಣಿಕ ಹಾಗೂ ತಾಂತ್ರಿಕ ಸಂಸ್ಥೆಗಳನ್ನು ಹೊಂದಿದ್ದು, ಕೌಶಲ್ಯವುಳ್ಳ ಮಾನವ ಸಂಪನ್ಮೂಲಗಳನ್ನು ಜವಳಿ ಉದ್ಯಮಕ್ಕೆ ಒದಗಿಸಲು ಶಕ್ತವಾಗಿರುವುದರಿಂದ ಕೇಂದ್ರ ಸರ್ಕಾರದ ಮಿತ್ರಾ ಯೋಜನೆಯಡಿ ಈ ಮೂರು ಜಿಲ್ಲೆಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿಗಳು ಕೇಂದ್ರ ಜವಳಿ ಖಾತೆ ಸಚಿವರೂ ಆದ ಪಿಯೂಶ್ ಗೋಯಲ್ ಅವರಿಗೆ  ಮನವಿ ಮಾಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.