BJP Foundation Day:ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿ

ಬಿಜೆಪಿ 42ನೇ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ,  ಸಿಎಂ ಬಸವರಾಜ ಬೊಮ್ಮಾಯಿಯವರು ಸೇರಿ ಅನೇಕ ಗಣ್ಯರು ಭಾಗವಹಿಸಿದ್ದಾರೆ. 

Written by - Zee Kannada News Desk | Last Updated : Apr 6, 2022, 01:58 PM IST
  • ಬಿಜೆಪಿ 42ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ
  • ನವದೆಹಲಿಯ ಕೇಂದ್ರ ಕಛೇರಿಯಲ್ಲಿ ನಡೆದ ಸಭೆ
  • ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಅನೇಕರು ಭಾಗಿ
BJP Foundation Day:ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿ title=
CM Basavaraj Bommai

ಬೆಂಗಳೂರು: ಇಂದು ಬಿಜೆಪಿ 42ನೇ ಸಂಸ್ಥಾಪನಾ ದಿನ(BJP Foundation Day)ದ ಹಿನ್ನೆಲೆಯಲ್ಲಿ ನವದೆಹಲಿಯ ಕೇಂದ್ರ ಕಛೇರಿಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ,  ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai)ಯವರು ಸೇರಿ ಅನೇಕ ಗಣ್ಯರು ಭಾಗವಹಿಸಿದ್ದಾರೆ. 

ಇದನ್ನು ಓದಿ: BJP Foundation Day:ಇಂದು ಬಿಜೆಪಿ 42ನೇ ಸಂಸ್ಥಾಪನಾ ದಿನ: ದಿನದ ಪ್ರಾಮುಖ್ಯತೆ ತಿಳಿಸಿದ ಪ್ರಧಾನಿ

ಇನ್ನು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಸಂಸ್ಥಾಪನ ದಿನಾಚರಣೆಯ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. "ಬಿಜೆಪಿ ಪಾಲಿಗೆ ಈ ಬಾರಿಯ ಸಂಸ್ಥಾಪನಾ ದಿನ ತುಂಬ ಮಹತ್ವದ್ದು. ಅದಕ್ಕೆ ಮೂರು ಕಾರಣಗಳಿವೆ.  ಮೊದಲನೆಯದು ಈ ಬಾರಿ ನಾವೆಲ್ಲರೂ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿದ್ದೇವೆ. ಇದು ಸ್ಫೂರ್ತಿದಾಯಕ ಸಂದರ್ಭ. ಎರಡನೆ ವಿಚಾರವೆಂದರೆ, ಭಾರತ ಜಾಗತಿಕ ಮಟ್ಟದಲ್ಲಿ ಕ್ಷಿಪ್ರವಾಗಿ ಅಭಿವೃದ್ಧಿಯಾಗುತ್ತಿದೆ. ಹೊಸ ಹೊಸ ಅವಕಾಶಗಳು ಭಾರತಕ್ಕೆ ನಿರಂತರವಾಗಿ ಲಭ್ಯವಾಗುತ್ತಿವೆ. ಇನ್ನು ಮೂರನೆಯ ಕಾರಣವೆಂದರೆ,  ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಏರುವ ಮೂಲಕ ಮತ್ತೆ ಆಡಳಿತಕ್ಕೆ ಬಂದಿದೆ. ಮೂರು ದಶಕಗಳ ನಂತರ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ 100 ದಾಟಿದೆ ಎಂದು ಸಂತಸ ವ್ಯಕ್ತಪಡಿಸಿದರು.  

ಇದನ್ನು ಓದಿ: Amul Milk: ಹಣದುಬ್ಬರದ ಮತ್ತೊಂದು ಹೊಡೆತ! ಹೆಚ್ಚಾಗಲಿದೆ ಅಮೂಲ್ ಹಾಲಿನ ದರ

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ವಿ. ಸುನಿಲ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್  ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News