ಕನ್ನಡ ಸಾಹಿತ್ಯ ಪರಿಷತ್ ಆಪ್ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಮಕ್ಕಳಲ್ಲಿ ಕನ್ನಡದ ಭಾಷೆ, ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆ ಕುರಿತು ಅಭಿಮಾನ ಮೂಡಿಸುವ ಕೆಲಸವನ್ನು ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜೊತೆಯಾಗಿ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.

Written by - Zee Kannada News Desk | Last Updated : Aug 4, 2022, 11:47 PM IST
  • ಕನ್ನಡಾಭಿಮಾನ ಮೂಡಿಸುವ ನಿಟ್ಟಿನಲ್ಲಿ ಸದಾ ಜೊತೆಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಆಪ್ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ title=
Photo Courtsey: Twitter

ಬೆಂಗಳೂರು: ಮಕ್ಕಳಲ್ಲಿ ಕನ್ನಡದ ಭಾಷೆ, ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆ ಕುರಿತು ಅಭಿಮಾನ ಮೂಡಿಸುವ ಕೆಲಸವನ್ನು ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜೊತೆಯಾಗಿ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ತಿನ ಆಪ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾಹಿತ್ಯ ಪರಿಷತ್ತು ಮತ್ತು ಸರ್ಕಾರದ ಸಂಬಂಧ ಕೇವಲ ಸಾಹಿತ್ಯ ಸಮ್ಮೇಳನ ನಡೆಸುವುದಕ್ಕಷ್ಟೇ ಸೀಮಿತ ಗೊಳಿಸದೆ, ಕನ್ನಡಾಭಿಮಾನ ಮೂಡಿಸುವ ನಿಟ್ಟಿನಲ್ಲಿ ಸದಾ ಜೊತೆಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: ನಾಯಕನಾಗಿ 'ಸಜ್ಜು' ಎಂಟ್ರಿಗೆ ವೇದಿಕೆ ಸಜ್ಜು..! ಹೇಗಿದೆ ‘ಮ್ಯಾನ್ಷನ್ ಹೌಸ್ ಮುತ್ತು’ ಲುಕ್..?‌

ಕನ್ನಡ ಸಾಹಿತ್ಯ ಪರಿಷತ್ತು ತಂತ್ರಜ್ಞಾನದ ಬಳಕೆಯ ಮೂಲಕ ಸಾಹಿತ್ಯಾಸಕ್ತರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಸಾಹಿತ್ಯ ಪರಿಷತ್ತಿನ ಶ್ರೀಮಂತ ಸಾಹಿತ್ಯ ಭಂಡಾರವನ್ನು ಜನರಿಗೆ ಪರಿಚಯಿಸಲು ತಂತ್ರಜ್ಞಾನದ ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಇದರೊಂದಿಗೆ ಉತ್ಕೃಷ್ಟ, ಸಮಾಜಮುಖಿ ಸಾಹಿತ್ಯ ರಚನೆಗೆ ಉತ್ತೇಜನ ನೀಡುವ ಕೆಲಸ ಮಾಡುವಂತೆ ತಿಳಿಸಿದರು.

ಸಮಾರಂಭದಲ್ಲಿ ಸಚಿವರಾದ ವಿ. ಸೋಮಣ್ಣ, ಡಾ. ಅಶ್ವತ್ಥನಾರಾಯಣ, ಶಿವರಾಮ ಹೆಬ್ಬಾರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ,ಶಾಸಕ ನೆಹರು ಓಲೆಕಾರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News