ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಇಡೀ ಕರ್ನಾಟಕದ ಮಾಹಿತಿಯನ್ನು ಬಳಸಿಕೊಂಡಿದ್ದು, ಚುನಾವಣೆಯನ್ನೂ ಸೋತಿದ್ದಾರೆ. ಕಾಂಗ್ರೆಸ್ ಪಕ್ಷದವರು ಹತಾಶರಾಗಿದ್ದು, ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚುನಾವಣೆಯ ನಾಮಪತ್ರ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಕಾಂಗ್ರೆಸ್ ನ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ರಮಣಶ್ರೀ ಪ್ರತಿಷ್ಠಾನ, ಬೆಂಗಳೂರು ಇಲ್ಲಿ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ರಾಜಧಾನಿಯಲ್ಲಿ ರಸ್ತೆ ಗಂಡಾಗುಂಡಿ: ನ. 19ಕ್ಕೆ ಎಎಪಿಯಿಂದ ವಿಧಾನಸೌಧಕ್ಕೆ ಮುತ್ತಿಗೆ ಕರೆ


ಕಾಂಗ್ರೆಸ್ ಪಕ್ಷ ನಡೆಸಿದ ಸಾಮಾಜಿಕ ಆರ್ಥಿಕ ಸಮೀಕ್ಷೆ : ಸಿದ್ದರಾಮಯ್ಯನವರು ತಮ್ಮ ಅವಧಿಯಲ್ಲಿ 130 ಕೋಟಿ ರೂ. ಖರ್ಚು ಮಾಡಿ, ಇಡೀ ಕರ್ನಾಟಕದ ಸಾಮಾಜಿಕ ಆರ್ಥಿಕ ಸಮೀಕ್ಷೆ ಎಂಬ ಹೆಸರಿನಲ್ಲಿ ಜಾತಿ , ಉಪಜಾತಿಗಳನ್ನು ಸೃಷ್ಟಿಸಿ, ದಾಖಲೆಗಳನ್ನು ಮಾಡಿ, ಆ ಮಾಹಿತಿಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸದೇ, ಚುನಾವಣೆಯ ಉದ್ದೇಶಕ್ಕೆ ಕಾಂಗ್ರೆಸ್ ಬಳಸಿಕೊಂಡಿತು. ಈ ವಿಷಯದಲ್ಲಿ ಶಿಕ್ಷೆ ಮೊದಲು ಸಿದ್ದರಾಮಯ್ಯನವರ ಸರ್ಕಾರಕ್ಕೆ ಮೊದಲು ಆಗಬೇಕು. ಪ್ರಸ್ತುತ ಈ ವಿಚಾರದಲ್ಲಿ ಸರ್ಕಾರಕ್ಕೆ ಸಂಬಂಧಿಸಿರುವುದಿಲ್ಲ. ತಳಹಂತದಲ್ಲಿ ಈ ಕೆಲಸವಾಗಿದ್ದರೆ, ಸೂಕ್ತ ವಿಚಾರಣೆಯಾಗಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ತಿಳಿಸಿದರು.


ತಜ್ಞರ ಸಮಿತಿಯಿಂದ ಪರಿಶೀಲನೆ : ಸೂರಿನಲ್ಲಿ ತಂಗುದಾಣದ ವಿನ್ಯಾಸದ ಬಗ್ಗೆ ಶಾಸಕ ರಾಮದಾಸ್ ಅವರು ಸ್ಥಳೀಯ ಸಂಸದರ ಮೇಲೆ ಅಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿವಾವದ ಬಗ್ಗೆ ಪರಿಶೀಲಿಸಲು ನಡೆಸಲು ತಜ್ಞರ  ಸಮಿತಿಯನ್ನು ರಚಿಸಲು ತಿಳಿಸಲಾಗಿದೆ. ಈ ವಿಷಯದಲ್ಲಿ ಸ್ಥಳೀಯ ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಏಕೆ ಬಂದಿದೆ ಎಂದು ತಿಳಿಯುವುದಕ್ಕಿಂತ, ತಜ್ಞರ ಸಮಿತಿ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.


ಇದನ್ನೂ ಓದಿ : "ನನ್ನ ಹೆಸರಿಗೆ ಮಸಿ ಬಳಿಯಲು ಹೊಂಚು ಹಾಕುತ್ತಿರುವವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ"


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.