ದೆಹಲಿ ಭೇಟಿ ಫಲಪ್ರದ, ಸಚಿವರಿಂದ ಸಕಾರಾತ್ಮಕ ಸ್ಪಂದನೆ : ಸಿಎಂ ಬೊಮ್ಮಾಯಿ
ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾಜಪ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರೆತಿದ್ದು ಸಂತೋಷ ತಂದಿದೆ ಎಂದರು.
ನವದೆಹಲಿ : ಈ ಬಾರಿ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ , ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ತಿಳಿಸಿದರು.
ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾಜಪ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರೆತಿದ್ದು ಸಂತೋಷ ತಂದಿದೆ ಎಂದರು.
ಇದನ್ನು ಓದಿ: ಮಂಡ್ಯದ ವಿದ್ಯಾರ್ಥಿನಿಯನ್ನು ಉಗ್ರ ಹೊಗಳಿರುವ ವಿಚಾರ; ಸಮಗ್ರ ತನಿಖೆಗೆ ದಿವ್ಯಾ ಹಾಗರಗಿ ಒತ್ತಾಯ
ಏ. 16 ಮತ್ತು 17 ಭಾಜಪ ರಾಜ್ಯ ಕಾರ್ಯಕಾರಿಣಿ ಸಭೆ: ಏಪ್ರಿಲ್ 16 ಮತ್ತು 17 ರಂದು ಭಾಜಪ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಚುನಾವಣೆಗೆ ಯಾವ ರೀತಿಯಲ್ಲಿ ಪೂರ್ವಭಾವಿ ತಯಾರಿಗಳನ್ನು ಮಾಡುಕೊಳ್ಳಬೇಕೆಂದು ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆಯನ್ನು ನೀಡಲಿದ್ದಾರೆ.
ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಸ್ಥೂಲ ಚರ್ಚೆ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಸ್ಥೂಲವಾಗಿ ಚರ್ಚೆಯಾಗಿದೆ. ವರಿಷ್ಠರು ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕಾರ್ಯಕಾರಿಣಿ ಸಭೆಗೆ ಬಂದ ಸಂದರ್ಭದಲ್ಲಿ ಮಿಕ್ಕ ವಿಚಾರಗಳನ್ನು ಮಾತನಾಡುವುದಾಗಿ ತಿಳಿಸಿದ್ದಾರೆ. ಇಲ್ಲಿಯ ವರಿಷ್ಠರು, ನಾಯಕರು, ಸಂಘಟನಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡೋಣ ಎಂದು ತಿಳಿಸಿದ್ದಾರೆ ಎಂದರು.
ಇದನ್ನು ಓದಿ: "ಉರ್ದು ಭಾಷೆಯಲ್ಲಿ ಮಾತನಾಡದಕ್ಕೆ ಚಂದ್ರು ಕೊಲೆ" : ಎನ್. ರವಿಕುಮಾರ್
ಬಜೆಟ್ ಯೋಜನೆಗಳ ಅನುಷ್ಠಾನಕ್ಕೆ ಮಹತ್ವ: ಬೆಂಗಳೂರಿಗೆ ಹಿಂತಿರುಗಿದ ನಂತರ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆ ಗಳ ಆದೇಶಗಳನ್ನು ನೀಡಿ ಅವುಗಳ ಅನುಷ್ಠಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.