ಬೆಂಗಳೂರು: ಉಕ್ರೇನ್ ನಲ್ಲಿ (Ukraine) ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ: ಏನಿದು ಉಕ್ರೇನ್-ರಷ್ಯಾ ಸಂಘರ್ಷ..? ಜಾಗತಿಕ ಯುದ್ದಕ್ಕೆ ನಾಂದಿ ಹಾಡುತ್ತಾ ಈ ಯುದ್ಧ...?
ಇಂದು ವಿಧಾನಸೌಧದಲ್ಲಿ ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ (CM Bommai), ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದೆ. ಅಲ್ಲಿ ಅನೇಕ ಭಾರತದ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ (Russia-Ukraine War) ಪ್ರಾರಂಭವಾಗಿದ್ದರಿಂದ ಭಾರತದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎರಡು ಬಸ್ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10 ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.
ಉಕ್ರೇನ್ ನಲ್ಲಿರುವ ಭಾರತದ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ, ಅಲ್ಲಿನ ರಾಯಭಾರ ಕಚೇರಿ (Embassy) ಮಾಹಿತಿ ನೀಡುತ್ತಿದೆ. ಭಾರತೀಯ ರಾಯಭಾರ ಕಚೇರಿ ಸೂಕ್ತ ಮಾರ್ಗದರ್ಶನವನ್ನು ನೀಡಿದೆ. ವಿಮಾನಗಳು ಪುನಃ ಪ್ರಾರಂಭವಾದಾಗ ವಿದ್ಯಾರ್ಥಿಗಳನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರದ ವಿದೇಶಾಂಗ ಕಾರ್ಯದರ್ಶಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕೇಂದ್ರ ವಿದೇಶಾಂಗ ಸಚಿವರೊಂದಿಗೂ ಈ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: Russia-Ukraine War: ಉಕ್ರೇನ್ ಕುರಿತು ಭಾರತದ ನಿಲುವಿಗೆ ರಷ್ಯಾದಿಂದ ಬಂತು ಅತಿ ದೊಡ್ಡ ಪ್ರತಿಕ್ರಿಯೆ
ಉಕ್ರೇನ್ನಲ್ಲಿ ಯುದ್ಧದ ಛಾಯೆಯಿಂದಾಗಿ ಕಳೆದ ವಾರವೇ 200 ಭಾರತೀಯರು ಮರಳಿದ್ದರು. ಆಗ ವಿದ್ಯಾರ್ಥಿಗಳಿಗೆ ಮಾಹಿತಿ ಇರಲಿಲ್ಲವೇ ಎಂಬುದಕ್ಕೆ ಪ್ರತಿಕ್ರಯಿಸಿದ ಸಿಎಂ, ವಿದ್ಯಾರ್ಥಿಗಳು ಬ್ಯಾಚ್ಗಳಲ್ಲಿ ಭಾರತಕ್ಕೆ ಮರಳುತ್ತಿದ್ದು, ಈ ಬ್ಯಾಚ್ ಕಡೆಯದಾಗಿತ್ತು. ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗುವುದು ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ