ಏಪ್ರಿಲ್ 1 ರಿಂದ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸರ್ಕಾರಿ ಆದೇಶ ಹೊರಡಿಸಲು ಮುಖ್ಯಮಂತ್ರಿ ಸೂಚನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಆಯವ್ಯಯದಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನ ಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಆಯವ್ಯಯದಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನ ಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
೨೦೨೨-೨೩ ನೇ ಸಾಲಿನ ಆರ್ಥಿಕ ವರ್ಷ ಆರಂಭದ ಮೊದಲ ದಿನವಾಗಿರುವ ಏಪ್ರಿಲ್ 1 ರಿಂದಲೇ ಬಜೆಟ್ ಘೋಷಿತ ಯೋಜನೆಗಳ ಜಾರಿಗೆ ಸರ್ಕಾರಿ ಆದೇಶಗಳನ್ನು ಹೊರಡಿಸುವಂತೆ ಸರ್ಕಾರದ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ‘ಸ್ವಂತ ಬಲದ ಮೇಲೆ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ’
ಈ ಕುರಿತು ಖುದ್ದು ಎಲ್ಲ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿರುವ ಮುಖ್ಯಮಂತ್ರಿಯವರು, ಆಯವ್ಯಯದಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಉಲ್ಲೇಖಿಸಿ, ಈ ಕುರಿತು ಇಲಾಖೆಯಿಂದ ಯೋಜನೆಯ ರೂಪುರೇಷೆಗಳ ಕುರಿತು ಪ್ರಸ್ತಾವನೆ ಸಿದ್ಧ ಪಡಿಸಿ, ಆರ್ಥಿಕ ಇಲಾಖೆಯ ಆಯವ್ಯಯ ಸಲಹೆಯಂತೆ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಆದೇಶಗಳನ್ನು ಹೊರಡಿಸುವಂತೆ ಸೂಚಿಸಿದ್ದಾರೆ.
ಅಲ್ಲದೆ, ಈ ಯೋಜನೆಗಳನ್ನು ಅತಿ ಶೀಘ್ರವಾಗಿ ಜಾರಿಗೊಳಿಸುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.