ಬೆಂಗಳೂರು : ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕನ್ನಡಿಗ ಭಕ್ತರ ಮೇಲೆ ಹಲ್ಲೆ ನಡೆದಿದ್ದು, ಬೇರೆ ರಾಜ್ಯಗಳಿಂದ ಜಾತ್ರೆಗಳಿಗೆ ಭೇಟಿ ನೀಡಿವವರು ಹೆಚ್ಚಿರುತ್ತಾರೆ. ಅಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಹೊರಗಿನಿಂದ ಬರುವ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಆಂಧ್ರಪ್ರದೇಶದ ಮುಖ್ಯ ಮಂತ್ರಿಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಆಂಧ್ರಪ್ರದೇಶದ  ಜಾತ್ರೆಯಲ್ಲಿ ನಡೆದ ಹಿಂಸಾಚಾರ ಬಗ್ಗೆ  ಮಾತನಾಡಿದ ಸಿಎಂ ಬೊಮ್ಮಾಯಿ(Basavaraj Bommai), ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶದಿಂದಲೂ ದೊಡ್ಡ ಪ್ರಮಾಣದಲ್ಲಿ ಭಕ್ತಾದಿಗಳು ಭೇಟಿ ನೀಡುತ್ತಾರೆ. ಹಿಂದಿರುಗುವ ಸಂದರ್ಭದಲ್ಲಿ ಕೆಲವು ಭಕ್ತರ ನಡುವೆ ಜಗಳ ಉಂಟಾಗಿ ಇರಿತವೂ ನಡೆದಿದೆ. 


ಇದನ್ನೂ ಓದಿ : ಮೀಸಲಾತಿ ಕಲ್ಪಿಸದೆ ಚುನಾವಣೆ ನಡೆಸಿದರೆ ಒಬಿಸಿ ಸಮುದಾಯಕ್ಕೆ ಅನ್ಯಾಯ : ಸಿದ್ದರಾಮಯ್ಯ


ಈ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಹೊರಗಿನಿಂದ ಬಂದಿದ್ದ ಭಕ್ತರ ನಡುವೆ ಜಗಳ ಉಂಟಾಗಿದೆ. ಆಂಧ್ರಪ್ರದೇಶದ ಅಧಿಕಾರಿಗಳೊಂದಿಗೆ ರಾತ್ರಿಯಿಂದಲೇ  ಸಂಪರ್ಕ ದಲ್ಲಿದ್ದೇನೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಇಬ್ಬರಿಗೆ ತೀವ್ರವಾಗಿ ಗಾಯವಾಗಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ  ಆಂಧ್ರಪ್ರದೇಶ(Andhra Pradesh)ದ ಮುಖ್ಯ ಮಂತ್ರಿಗಳೊಂದಿಗೆ ಮಾತನಾಡಲು ಪ್ರಯತ್ನ ನಡೆದಿದೆ ಎಂದರು.ರ 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಹಾಗೂ YouTube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.