Basavaraj Bommai: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5,030 ಕೋಟಿ ರೂ. ಅನುದಾನಕ್ಕೆ ಮನವಿ

ಕಲ್ಯಾಣ ಕರ್ನಾಟಕ(Kalyana Karnataka) ಭಾಗಕ್ಕೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳಡಿ 5,030 ಕೋಟಿ ರೂ. ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿಗಳು ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿದ್ದಾರೆ.

Written by - Prashobh Devanahalli | Edited by - Puttaraj K Alur | Last Updated : Feb 7, 2022, 08:18 PM IST
  • ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ 5,030 ಕೋಟಿ ರೂ. ಅನುದಾನಕ್ಕೆ ಮನವಿ
  • ಕೇಂದ್ರ ಪುರಸ್ಕೃತ ಯೋಜನೆಗಳಡಿ ಅನುದಾನಕ್ಕೆ ನಿರ್ಮಲಾ ಸೀತಾರಾಮನ್ ಗೆ ಸಿಎಂ ಬೊಮ್ಮಾಯಿ ಮನವಿ
  • ಇತ್ತೀಚೆಗೆ ಆಂಧ್ರಪ್ರದೇಶವು ತನ್ನ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿತ್ತು
Basavaraj Bommai: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5,030 ಕೋಟಿ ರೂ. ಅನುದಾನಕ್ಕೆ ಮನವಿ  title=
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅನುದಾನಕ್ಕೆ ಮನವಿ

ನವದೆಹಲಿ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಡಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 5,030 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: DK Shivakumar : 'ಹಿಜಾಬ್ ವಿವಾದ ಇಡೀ ದೇಶಕ್ಕೆ ದೊಡ್ಡ ಅಪಮಾನ'

ಇತ್ತೀಚೆಗೆ ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಚರ್ಚಿಸಿದಂತೆ ಆಂಧ್ರ ಪ್ರದೇಶ ರಾಜ್ಯವು ತನ್ನ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ(Development Grant) ಒದಗಿಸುವಂತೆ ಮನವಿ ಮಾಡಿತ್ತು. ಅಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು(Kalyana Karnataka Region)ದೇಶದಲ್ಲಿಯೇ ಹಿಂದುಳಿದ ಜಿಲ್ಲೆಗಳ ಸಾಲಿನಲ್ಲಿ ಸೇರಿವೆ.

ಇದನ್ನೂ ಓದಿ: Heart Attack: ತಿಂಡಿ ತಿನ್ನಲು ಬಂದಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಹೋಟೆಲ್​ನಲ್ಲೇ ಸಾವು!

371(ಜೆ) ವಿಧಿಯನ್ವಯ ಸಂವಿಧಾನ ತಿದ್ದುಪಡಿಯ ಮೂಲಕ ಈ ಭಾಗಕ್ಕೆ ವಿಶೇಷ ಸ್ಥಾನ ನೀಡಲಾಗಿದ್ದು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಒದಗಿಸಲಾಗಿದೆ. ಆದರೆ ಈ ಭಾಗವು ಅಭಿವೃದ್ಧಿಯಲ್ಲಿ ಬಹಳ ಹಿಂದುಳಿದಿರುವುದರಿಂದ ವಿಶೇಷ ಗಮನ(Kalyana Karnataka Development)ನೀಡುವ ಅಗತ್ಯವಿದೆ. ನೀತಿ ಆಯೋಗದ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿಯೂ ಈ ಜಿಲ್ಲೆಗಳು ಹಿಂದುಳಿದಿರುವುದರಿಂದ ಕಲ್ಯಾಣ ಕರ್ನಾಟಕ(Kalyana Karnataka) ಭಾಗಕ್ಕೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳಡಿ 5,030 ಕೋಟಿ ರೂ. ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿಗಳು ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News