Maharashtra border dispute: ದಾವಣಗೆರೆ: ರಾಜ್ಯ ಪುನರ್ವಿಂಗಡಣಾ ಕಾಯ್ದೆ ಮತ್ತು ಸಂವಿಧಾನ 3ನೇ ವಿಧಿ ಅನುಸಾರ ಮಹಾರಾಷ್ಟ್ರ ಗಡಿ ವಿವಾದ ಹಿನ್ನಲೆಯಲ್ಲಿ 2004 ರಲ್ಲಿ ಹೂಡಿದ ದಾವೆಗೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ಈ ವಾದಕ್ಕೆ ಹೆಚ್ಚಿನ ಒತ್ತು ನೀಡಿ ರಾಜ್ಯ ಸರ್ಕಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಸಮರ್ಥವಾದ ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


COMMERCIAL BREAK
SCROLL TO CONTINUE READING

ಶಾಸಕ ಎಸ್.ವಿ.ರವಿಂದ್ರನಾಥ್ ಹುಟ್ಟುಹಬ್ಬದ ಸಮಾರಂಭದಲ್ಲಿ ಭಾಗವಹಿಸಲು ದಾವಣಗೆರೆಗೆ ಆಗಮಿಸಿದ ಸಿಎಂ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.


ಇದನ್ನೂ ಓದಿ: Basavaraj Bommai : ಬಿಜೆಪಿ ಸರ್ಕಾರದಿಂದ 150 ಕ್ಕೂ ಹೆಚ್ಚು ಕೆರೆಗಳು ತುಂಬಿವೆ : ಸಿಎಂ ಬೊಮ್ಮಾಯಿ


ಹಿರಿಯ ನ್ಯಾಯವಾದಿಗಳಾದ ಮುಕುಲ್ ರೊಹ್ಟಗಿ, ಉದಯ ಹೊಳ್ಳ ನೇತೃತ್ವದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸಲಿದ್ದೇವೆ. ಕಾನೂನು ಹೋರಾಟಕ್ಕೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರನ್ನು ಸಹ ಸರ್ಕಾರ ನೇಮಿಸಿದೆ. ನಾವು ಸಂವಿಧಾನ ಹಾಗೂ ಕಾನೂನು ಬದ್ಧವಾಗಿ ಇದ್ದೇವೆ. ಕರ್ನಾಟಕ ರಾಜ್ಯದ ಭೂ ಪ್ರದೇಶದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ರಾಜ್ಯದ ಬೇಡಿಕೆ ಹಾಗೂ ನಿಲುವುಗಳನ್ನು ವಿಚಾರಣೆ ಸಂದರ್ಭದಲ್ಲಿ ಮಂಡಿಸಲಾಗುವುದು. ಈ ಸಂಬಂಧವಾಗಿ ಮುಂದಿನ ವಾರ ಸರ್ವಪಕ್ಷ ಹಾಗೂ ಕಾನೂನು ತಜ್ಞರ ಸಭೆ ಕರೆದಿದ್ದೇನೆ. ಯಾವ ವಿಚಾರವನ್ನು ಮಂಡಿಸಬೇಕು ಎಂಬುದರ ಕುರಿತು ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಗುವುದು ಎಂದರು.


ಮಹಾರಾಷ್ಟ್ರ ಹಿರಿಯ ರಾಜಕಾರಣಿ ಶರದ್ ಪವಾರ್ ಬೆಳಗಾವಿ ಗಡಿ ವಿವಾದ ಇಟ್ಟುಕೊಂಡು ಇದುವರೆಗೂ ರಾಜಕೀಯ ಮಾಡಿದ್ದಾರೆ. ಬೆಳಗಾವಿ ಬಗೆಗಿನ ಅವರ ಕನಸು ನನಸಾಗಿಲ್ಲ, ಮುಂದೆಯೂ ನನಸಾಗುವುದಿಲ್ಲ. ಮಹಾರಾಷ್ಟ್ರ ಭಾಗದ ಜನರು ಕರ್ನಾಟಕದಲ್ಲಿ ವಿಲೀನವಾಗಲು ಬಹುದಿನಗಳಿಂದ ಬೇಡಿಕೆ ಇಟ್ಟಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು‌.


ಇದನ್ನೂ ಓದಿ: ರಾಜ್ಯದ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ: ಬಸವರಾಜ ಬೊಮ್ಮಾಯಿ


ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಸಂಸದ ಜಿ.ಎಂ.ಸಿದ್ದೇಶ್ವರ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಶಿವಾನಂದ ಕಪಾಶಿ, ಜಿ.ಪಂ‌.ಸಿಇಓ ಡಾ.ಚೆನ್ನಪ್ಪ, ಮಹಾನಗರ ಪಾಲಿಕೆ ಆಯುಕ್ತ  ವಿಶ್ವನಾಥ್ ಮತ್ತಜ್ಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಉಪವಿಭಾಗಧಿಕಾರಿ ದುರ್ಗಶ್ರೀ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.