ಬೆಂಗಳೂರು:  ಸಂಪುಟ ವಿಸ್ತರಣೆ ಬಗ್ಗೆ ಭಾ.ಜ.ಪ ರಾಷ್ಟ್ರೀಯ  ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನವದೆಹಲಿಯಲ್ಲಿ ಕರ್ನಾಟಕದ ಬಗ್ಗೆ ವಿಶೇಷ ಸಭೆ  ಕರೆಯುವುದಾಗಿ ತಿಳಿಸಿದ್ದಾರೆ. ಸಭೆಯ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ  ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 


COMMERCIAL BREAK
SCROLL TO CONTINUE READING

ಇದನ್ನು ಓದಿ: ಈಶ್ವರಪ್ಪ ರಾಜೀನಾಮೆಗೂ ಮುನ್ನ ಅನೇಕ ಟೆಂಡರ್ ಮಂಜೂರು: ಆಲಂ ಪಾಷಾ


ಕರ್ನಾಟಕದ ಬಗ್ಗೆ ದೆಹಲಿಯಲ್ಲಿ ಸಭೆ‌ ನಡೆಸುತ್ತೇವೆ. ಸಭೆಯ ನಂತರ ಮಾಹಿತಿ ನೀಡುತ್ತೇನೆ. ಆ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ಹೇಳಿದ್ದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.


ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದ ಎಲ್ಲರನ್ನೂ ಬಂಧಿಸಲಾಗಿದೆ. ಅದರ ಹಿಂದಿರುವ ನಾಯಕರ ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದರು. 


ಪಿ.ಎಸ್.ಐ ಪರೀಕ್ಷೆಯಲ್ಲಿ ಅಕ್ರಮವಾಗಿರುವ ಕುರಿತು ಗೃಹ ಸಚಿವರ ಗಮನಕ್ಕೆ ಬಂದ ಕೂಡಲೇ ನಿಷ್ಪಕ್ಷಪಾತ ತನಿಖೆಯಾಗಲು ಸಿಐಡಿಗೆ ವಹಿಸಲಾಗಿದೆ.   ಪರೀಕ್ಷೆಯಾಗಿರುವ ಕೇಂದ್ರದಲ್ಲಿ ಸಮಸ್ಯೆಯಾಗಿದ್ದರೆ, ಅಧೀಕ್ಷಕರ ಮಟ್ಟದಲ್ಲಿ ಸಮಸ್ಯೆ ಅಥವಾ ಮೇಲಾಧಿಕಾರಿಗಳ ಸಮಸ್ಯೆ ಇದ್ದರೆ ಸಮಗ್ರವಾಗಿ ತನಿಖೆ ಮಾಡಲು ಆದೇಶ ನೀಡಲಾಗಿದೆ. ಬೇರೆ ಪಕ್ಷದ ಸರ್ಕಾರವಾಗಿದ್ದರೆ ಮುಚ್ಚಿಹಾಕಲು ಪ್ರಯತ್ನ ಮಾಡುತ್ತಿದ್ದರು. ನಾವು ಸಿಐಡಿಗೆ ಮುಕ್ತ ಅವಕಾಶ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ. ಯಾರೇ ತಪ್ಪಿ ತಪ್ಪಿತಸ್ಥರಿದ್ದರೂ  ಕ್ರಮ ಕೈಗೊಳ್ಳಲಾಗುವುದು ಎಂದರು.


ಇದನ್ನು ಓದಿ: ಕರ್ನಾಟಕದಲ್ಲಿ ಎನ್​ಸಿಪಿ ಬಲಪಡಿಸಲು ನಿರ್ಧಾರ: ಬೆಂಗಳೂರಿನಲ್ಲಿಂದು ಪವಾರ್​ ಶಕ್ತಿ ಪ್ರದರ್ಶನ


ಪರೀಕ್ಷೆಗಳನ್ನು ಪುನಃ ಕೈಗೊಳ್ಳಲು ವಿದ್ಯಾರ್ಥಿಗಳು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಿಐಡಿ ಸಮಗ್ರ ವರದಿ ನೀಡಿದ ನಂತರ  ತೀರ್ಮಾನ ಕೈಗೊಳ್ಳಲಾಗುವುದು ಎಂದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.